37.9 C
ಪುತ್ತೂರು, ಬೆಳ್ತಂಗಡಿ
March 6, 2026
ಸಾಧಕರು

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಂಗಳೂರು ಹಾಗೂ ಸಾಹಿತ್ಯ ಸೌರಭ ಫೌಂಡೇಶನ್ ಒಡಗೋಲ ಇವರ ಸಹಯೋಗದಲ್ಲಿ ಕೊಡಮಾಡುವ ರಾಜ್ಯ ಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿಗೆ‌ ಶಿಕ್ಷಕಿ ಹಾಗೂ ಕವಯಿತ್ರಿ ಪದ್ಮಶ್ರೀ ಎಸ್.ಜೈನ್ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಆಯೋಜಿಸಲಾಗಿದ್ದ “ಕನ್ನಡದ ತೇರು ಎಳೆಯೋಣ ಬಾರ” ಅಭಿಯಾನದ ರಾಜ್ಯಮಟ್ಟದ ಕಾವ್ಯಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪದ್ಮಶ್ರೀ ಎಸ್.ಜೈನ್ ಅವರನ್ನು ಗೌರವಿಸಿ ಈ ಪ್ರಶಸ್ತಿ ಪತ್ರವನ್ನು ನೀಡಲಾಗಿದೆ. ಇವರು ಪ್ರಸಕ್ತ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಿ.ಎಸ್ಸಿ, ಬಿ.ಎಡ್ ಹಾಗೂ ಗಣಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು ಪತ್ರಕರ್ತ ಸಂದೇಶ ಎಸ್.ಜೈನ್ ಅವರ ಧರ್ಮಪತ್ನಿಯಾಗಿದ್ದಾರೆ.

ತಾಲೂಕಿನ ಕನ್ಯಾಡಿ-1 ಗ್ರಾಮದ ಮೇಗಿನ ಸುರೆಕ್ಯಗುತ್ತು ಮನೆಯ ನಿವಾಸಿಯಾಗಿರುವ ಇವರು ಹಾಲಿ ದಾಂಡೇಲಿಯಲ್ಲಿ ವಾಸವಾಗಿದ್ದಾರೆ. 130ಕ್ಕೂ ಹೆಚ್ಚು ಕವನಗಳನ್ನು ಬರೆದಿರುವ ಪದ್ಮಶ್ರೀ ಎಸ್. ಜೈನ್ ಅವರಿಗೆ ಈಗಾಗಲೇ 15ಕ್ಕೂ ಹೆಚ್ಚು ರಾಜ್ಯಮಟ್ಟದ ಪ್ರಶಸ್ತಿಗಳು ಬಂದಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಗಾಯಕಿಯಾಗಿಯೂ ಗಮನ ಸೆಳೆದಿರುವುದರ ಜೊತೆಗೆ ಕ್ರೀಡೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ರಾಜ್ಯಮಟ್ಟದಲ್ಲಿ ಬಹುಮಾನವನ್ನು ಪಡೆದುಕೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

Related posts

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya
error: Content is protected !!