September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಂಗಳೂರು ಹಾಗೂ ಸಾಹಿತ್ಯ ಸೌರಭ ಫೌಂಡೇಶನ್ ಒಡಗೋಲ ಇವರ ಸಹಯೋಗದಲ್ಲಿ ಕೊಡಮಾಡುವ ರಾಜ್ಯ ಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿಗೆ‌ ಶಿಕ್ಷಕಿ ಹಾಗೂ ಕವಯಿತ್ರಿ ಪದ್ಮಶ್ರೀ ಎಸ್.ಜೈನ್ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಆಯೋಜಿಸಲಾಗಿದ್ದ “ಕನ್ನಡದ ತೇರು ಎಳೆಯೋಣ ಬಾರ” ಅಭಿಯಾನದ ರಾಜ್ಯಮಟ್ಟದ ಕಾವ್ಯಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪದ್ಮಶ್ರೀ ಎಸ್.ಜೈನ್ ಅವರನ್ನು ಗೌರವಿಸಿ ಈ ಪ್ರಶಸ್ತಿ ಪತ್ರವನ್ನು ನೀಡಲಾಗಿದೆ. ಇವರು ಪ್ರಸಕ್ತ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಹ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಿ.ಎಸ್ಸಿ, ಬಿ.ಎಡ್ ಹಾಗೂ ಗಣಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು ಪತ್ರಕರ್ತ ಸಂದೇಶ ಎಸ್.ಜೈನ್ ಅವರ ಪತ್ನಿಯಾಗಿದ್ದಾರೆ. ತಾಲೂಕಿನ ಕನ್ಯಾಡಿ-1 ಗ್ರಾಮದ ಮೇಗಿನ ಸುರೆಕ್ಯಗುತ್ತು ಮನೆಯ ನಿವಾಸಿಯಾಗಿರುವ ಇವರು ಹಾಲಿ ದಾಂಡೇಲಿಯಲ್ಲಿ ವಾಸವಾಗಿದ್ದಾರೆ. 130ಕ್ಕೂ ಹೆಚ್ಚು ಕವನಗಳನ್ನು ಬರೆದಿರುವ ಪದ್ಮಶ್ರೀ ಎಸ್. ಜೈನ್ ಅವರಿಗೆ ಈಗಾಗಲೇ 15ಕ್ಕೂ ಹೆಚ್ಚು ರಾಜ್ಯಮಟ್ಟದ ಪ್ರಶಸ್ತಿಗಳು ಪಡೆದುಕೊಂಡಿದ್ದಾರೆ. ಗಾಯಕಿಯಾಗಿಯೂ ಗಮನ ಸೆಳೆದಿರುವುದರ ಜೊತೆಗೆ ಕ್ರೀಡೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ರಾಜ್ಯಮಟ್ಟದಲ್ಲಿ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya
error: Content is protected !!