September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

ಬೆಳ್ತಂಗಡಿ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ), ಕಳೆಂಜ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಬಿಷಪ್ ಮಾರ್ ಜೇಮ್ಸ್ ಪಟ್ಟೆರಿಲ್ CMF, ಅವರಿಗೆ ಸನ್ಮಾನ ಹಾಗೂ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮವು ಇಂದು ಸಂಜೆ ಬೆಳ್ತಂಗಡಿ ಬಿಷಪ್ ಹೌಸ್‌ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಅಧ್ಯಕ್ಷ ಅಗಸ್ಟೀನ್ T. A., ಗೌರವಾಧ್ಯಕ್ಷ ಸೆಬಾಸ್ಟಿಯನ್ P. T., ಉಪಾಧ್ಯಕ್ಷ ಮ್ಯಾಥ್ಯೂ V. T., ಕಾರ್ಯದರ್ಶಿ ಶಿಜೋ ಜೋಸೆಫ್, ಕೋಶಾಧಿಕಾರಿ ರಂಜಿತ್ P. S, ಜೋಸೆಪ್ ಕೆ ಡಿ, ಮಾಜಿ ಅಧ್ಯಕ್ಷರು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಸಂಸ್ಥೆಯ ಪರವಾಗಿ ಮಾತನಾಡಿದ ಅಧ್ಯಕ್ಷ ಅಗಸ್ಟೀನ್ T. A. ಅವರು ಹೇಳಿದರು:
ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘವು ಜನಸೇವೆ, ಬಡವರ ಏಳಿಗೆ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಕೊಂಡಿದೆ.
ನೂತನ ಧರ್ಮಾಧ್ಯಕ್ಷರಾದ ಮಾರ್ ಜೇಮ್ಸ್ ಪಟ್ಟೆರಿಲ್ ಬಿಷಪರ ಸಹಕಾರ ಮತ್ತು ಪ್ರೇರಣೆಯಿಂದ ಮುಂದಿನ ದಿನಗಳಲ್ಲಿ ಸಂಘದ ಕಾರ್ಯಗಳು ಇನ್ನಷ್ಟು ಪರಿಣಾಮಕಾರಿಯಾಗಿ ಸಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾರ್ ಜೇಮ್ಸ್ ಪಟ್ಟೆರಿಲ್ ಬಿಷಪರಿಗೆ ಸನ್ಮಾನ ಪತ್ರ ನೀಡಿ ಶಾಲು ಹೊದಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಂತ್ಯದಲ್ಲಿ ಸದಸ್ಯರು ಭಿಷಪರೊಂದಿಗೆ ಮಾತುಕತೆ ನಡೆಸಿ, CBK ಸಂಘಟನೆಯ ಭವಿಷ್ಯ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು.
ಬಿಷಪ್ ಸಂಘಟನೆಯ ಸೇವಾ ಚಟುವಟಿಕೆಗಳನ್ನು ಮೆಚ್ಚಿ, “ಇಂತಹ ಸಂಸ್ಥೆಗಳು ಸಮಾಜದ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ. ಯಾರು ಇಲ್ಲದವರಿಗೂ ನೀವು ಇದ್ದೀರಿ ಎಂಬುದು ನಿಜವಾದ ಕ್ರೈಸ್ತ ಸೇವೆಯ ಸಂಕೇತ,” ಎಂದು ಪ್ರೋತ್ಸಾಹದ ಮಾತುಗಳನ್ನು ನೀಡಿ ಆಶೀರ್ವಾದ ನೀಡಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಮೇ 15: ವಿದ್ಯುತ್ ನಿಲುಗಡೆ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!