37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

ಬೆಳ್ತಂಗಡಿ : ಮನೆ ಕಳ್ಳತನ ಪ್ರಕರಣದಲ್ಲಿ ಕುಖ್ಯಾತ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಮನೆಯಲ್ಲಿ ಅ.2 ರಿಂದ ಅ.6 ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ಸಬ್ ಇನ್ಸ್‌ಪೆಕ್ಟರ್ ಓಮನ ಮತ್ತು ತಂಡ ನ.11 ರಂದು ರಾತ್ರಿ ವೇಣೂರು ಕುಂಭಶ್ರೀ ಬಳಿ ವಾಹನ ತಪಾಸಣೆ ಮಾಡುವ ವೇಳೆ ಅನುಮಾನಸ್ಪದವಾಗಿ ಸ್ಕೂಟರ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿ ವಾಹನದ ದಾಖಲೆ ಮತ್ತು ವ್ಯಕ್ತಿಯನ್ನು ಪರಿಶೀಲನೆ ವೇಳೆ ಮಂಗಳೂರಲ್ಲಿ ಕಳ್ಳತನ ಮಾಡಿದ್ದು ಬೆಳಕಿಗೆ ಬಂದಿದೆ.

ವೇಣೂರು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡಿದಾಗ ಈತನ ಮೇಲೆ ಸುಮಾರು 150 ಪ್ರಕರಣ ಹೊಂದಿ 45 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿರುವ ಕುಖ್ಯಾತ ಕಳ್ಳ ಮೂಲತಃ ಚಿಕ್ಕಮಗಳೂರು ಜಿಲ್ಲೆಯವನಾಗಿದ್ದು. ಈತ ಮಂಗಳೂರು ಸುರತ್ಕಲ್ ಕಾನದಲ್ಲಿ ವಾಸಿಸುತ್ತಿರುವ ಇತ್ತೆ ಬರ್ಪೆ ಅಬೂಬಕ್ಕರ್ (71) ಎಂದು ಬೆಳಕಿಗೆ ಬಂದಿದೆ. ಹೆಚ್ಚಿನ ವಿಚಾರಣೆ ಮಾಡಿದಾಗ ನಾರಾವಿಯ ಕುತ್ಲೂರಿನ ಅವಿನಾಶ್ ಮನೆಯಲ್ಲಿ ಕಳ್ಳತನ ಮಾಡಿರುವುದು ಬಾಯಿಬಿಟ್ಟಿದ್ದಾನೆ.

ವೇಣೂರು ಪೊಲೀಸರು ಆರೋಪಿಯನ್ನು ನ.12 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಿದ್ದಾರೆ. ಆರೋಪಿ ಉಡುಪಿ ಜಿಲ್ಲೆಯ ಶಿರ್ವದಲ್ಲಿ ಕಳ್ಳತನ ಮಾಡಿ ಸಿಕ್ಕಿ ಬಿದ್ದು ಎರಡು ತಿಂಗಳು ಜೈಲು ಸೇರಿ ಇತ್ತಿಚೆಗೆ ಹೊರಬಂದಿದ್ದ ಎನ್ನಲಾಗಿದೆ.

ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ ನೇತೃತ್ವದಲ್ಲಿ ವೇಣೂರು ಸಬ್ ಇನ್ಸ್‌ಪೆಕ್ಟರ್ ಓಮನ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya
error: Content is protected !!