25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೆಳ್ತಂಗಡಿ: ವಿದ್ಯಾರ್ಥಿಗಳು ಅಂಕಗಳಿಸುವುದರೊಂದಿಗೆ ಪ್ರತಿಭಾನ್ವಿತರೂ ಆಗಿದ್ದಾಗ ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ್ ಪ್ರಭು ಹೇಳಿದರು. ‌

ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಾಧಕರನ್ನು ಅಭಿನಂದಿಸುವ ‘ಅಭಿನಂದನಂ’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಆತ್ಮವಿಶ್ವಾಸ ಮತ್ತು ನಾಯಕತ್ವವನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಪಾಲ್ಗೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆ ಯ ಅಧ್ಯಕ್ಷರಾದ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಉಪಸ್ಥಿತರಿದ್ದರು. ‌ ಉಪನ್ಯಾಸಕ ಶಂಕರ್ ರಾವ್ ಸ್ವಾಗತಿಸಿದರು. ಹರ್ಷಿತ್ ಕುಮಾರ್ ಧನ್ಯವಾದವಿತ್ತರು. ಸುಧೀರ್ ಕೆ ಎನ್ ನಿರೂಪಿಸಿದರು.

Related posts

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!