September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ .ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ರವರು ವಹಿಸಿಕೊಂಡು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಭ್ಯಾಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಶಿಲ್ಪಾ ಹಾಗೂ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಮತ್ತು ಕಾರ್ಯಕ್ರಮದ ಸಂಯೋಜಕರು , ಅಭ್ಯಾಸ್ ಪಿ .ಯು ಕಾಲೇಜಿನ ಉಪಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಹಾಗೂ ಪ್ರಭಾರ ಪ್ರಾಂಶುಪಾಲರಾದ ಗುರುಪ್ರಸಾದ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಈ ಶುಭ ಸಂದರ್ಭದಲ್ಲಿ ಕನಕದಾಸ ಜಯಂತಿಯು ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಗೌರವಿಸಲು , ಸಾಮಾಜಿಕ ಸಮಾನತೆಯನ್ನು ಎತ್ತಿ ಹಿಡಿಯಲು , ನಮ್ಮ ಜೀವನಕ್ಕೆ ದಾರಿದೀಪವಾಗಬಲ್ಲ ದಾಸ ಸಾಹಿತ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಕೀರ್ತನೆ ಮತ್ತು ತತ್ವಪದಗಳು ಸಮಾಜಕ್ಕೆ ನೀಡಿದ ಸಂದೇಶ ಇಂದಿಗೂ ದಾರಿದೀಪವಾಗಿದೆ ಎಂಬ ವಿಚಾರಗಳನ್ನ ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ಸಂಸ್ಥೆಯ ಕಾರ್ಯದರ್ಶಿ ಗಳಾದ ಶ್ರೀಮತಿ. ಶಿಲ್ಪಾ ಅವರು ದಾಸ ಕೀರ್ತನೆಗಳು ಅಧ್ಯಾತ್ಮ ಮತ್ತು ಮಾನವೀಯತೆಯ ಸಂದೇಶವನ್ನು ಸಾರುತ್ತದೆ, ಇದು ಕೇವಲ ಆಚರಣೆಯ ದಿನವಾಗಿರದೆ ನಮ್ಮ ನಾಡಿನ ಭಕ್ತಿ, ಶಾಂತಿ, ಸಾಮಾಜಿಕ ಸಾಮರಸ್ಯ ಮುಂತಾದ ಮೌಲ್ಯಗಳನ್ನು ನೆನಪಿಸುವ ಮಹತ್ವದ ಕ್ಷಣಗಳಾಗಿವೆ ಎಂದು ಅಭಿಪ್ರಾಯ ಪಟ್ಟರು.

ಪಿ.ಆರ್.ಓ ಧನಂಜಯ ಹಾಗೂ ಎಲ್ಲಾ ಬೋಧಕೇತರ ಸಿಬ್ಬಂದಿ ವರ್ಗದವರೂ, ಸಹಾಯಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು . ವಿದ್ಯಾರ್ಥಿ ತನುಶ್ರೀ ಪ್ರಾರ್ಥನೆಗೈದರು, ಕನ್ನಡ ವಿಭಾಗದ ಉಪನ್ಯಾಸಕರಾದ ಸುಧೀರ್ ನಿರೂಪಿಸಿದರು, ನಿಲಯ ಪಾಲಕರಾದ ಜೀತೇಶ್ ಸ್ವಾಗತಿಸಿದರು.

Related posts

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya
error: Content is protected !!