September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಉಳಿ ಹಾಗೂ ದ.ಕ.ಜಿ.ಪಂ.ಹಿ. ಪ್ರಾ.ಶಾಲೆ ಬಡಗ ಕಜೆಕಾರು ಇದರ ಸಹಭಾಗಿತ್ವದಲ್ಲಿ ಉಳಿ ಕ್ಲಸ್ಟರ್
ಮಟ್ಟದ ಪ್ರತಿಭಾ ಕಾರಂಜಿಯು ನ. 12 ರಂದು ಬಡಗ ಕಜೆಕಾರು ಶಾಲೆಯಲ್ಲಿ ನಡೆಯಿತು.

ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕಾಗಿ ಹಾಗೂ ಸ್ಪರ್ಧಾ ಮನೋಭಾವವನ್ನು ಬೆಳೆಸಲು ಈ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ ಸಿ ಆರ್ ವಿದ್ಯಾ ಸಂಸ್ಥೆಯ ಪ್ರಾಥಮಿಕ ವಿಭಾಗದ ಒಟ್ಟು 26 ಮಂದಿ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಒಟ್ಟು 10 ಪ್ರಥಮ, 8 ದ್ವಿತೀಯ ಹಾಗೂ 6 ತೃತೀಯ ಬಹುಮಾನಗಳನ್ನು ಪಡೆಯುವುದರ ಮೂಲಕ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪ್ರಥಮ ಸ್ಥಾನ ಪಡೆದ 10 ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾಕಾರಂಜಿಗೆ ಆಯ್ಕೆಯಾಗಿದ್ದು,
ಭಾಗವಹಿಸಿದ ಹಾಗೂ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ,ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ ಹಾಗೂ ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿ ಶುಭ ಹಾರೈಸಿದರು.

Related posts

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ ವಿಭಾಗ ಉದ್ಘಾಟನೆ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಸಮಾರಂಭ

Suddi Udaya
error: Content is protected !!