September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.16ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಮಕ್ಕಳ ರೋಗ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ 14 ವರ್ಷದೊಳಗಿನ ಎಲ್ಲಾ ಮಕ್ಕಳ ರೋಗ ತಪಾಸಣೆ ಉಚಿತವಾಗಿ ನಡೆಸಲಾಗುವುದು.


ಅಸ್ತಮ, ಉಬ್ಬಸ ಅತಿಸಾರ (ಅತಿಭೇದಿ), ಮಲಬದ್ಧತೆ, ಜ್ವರ, ಅಲರ್ಜಿ, ರ‍್ಯಾಶಸ್ (ದದ್ದುಗಳು), ಚರ್ಮದ ಸೋಂಕು, ಕೆಮ್ಮು, ಕಫ, ಹೊಟ್ಟೆ ನೋವು, ಹಲ್ಲುನೋವು, ಕಟ್ಟಿಕೊಳ್ಳುವ ಮೂಗು, ವಾಕರಿಕೆ ಮತ್ತು ವಾಂತಿ, ಪೌಷ್ಟಿಕಾಂಶದ ಕೊರತೆ, ಮೂರ್ಛೆರೋಗ, ಮಕ್ಕಳ ಬೆಳವಣಿಗೆಯ ಮೌಲ್ಯಮಾಪನ, ಜಾಂಡೀಸ್, ಸಾಮಾನ್ಯ ಪರೀಕ್ಷೆಗಳನ್ನು ನಡೆಸಲಾಗುವುದು. ಮಕ್ಕಳ ರೋಗ ತಜ್ಞರಾದ ಡಾ| ಪ್ರತೀತ್, ಡಾ| ನಿಖಿತಾ ಮಿರ್ಲೆ, ಡಾ| ಅರ್ಚನಾ ಕೆ.ಎಂ ಇವರು ಮಕ್ಕಳ ರೋಗ ತಪಾಸಣೆ ನಡೆಸಲಿದ್ದಾರೆ. ಹೆಸರು ನೊಂದಾಯಿಸಿಕೊಳ್ಳಲು 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya
error: Content is protected !!