September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಜೆ.ಜೆ. ಮೆಡಿಕಲ್ ಕಾಲೇಜ್, ದಾವಣಗೆರೆ ಇವರ ಆಶ್ರಯದಲ್ಲಿ ನಡೆದ ಅಂತರ್ವಲಯ ಮಟ್ಟದ ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಕೈಸೇರಿಸಿಕೊಂಡಿದೆ.

ಸೆಮಿಫೈನಲ್ ಪಂದ್ಯದಲ್ಲಿ ಉಜಿರೆಯ ತಂಡವು ಸಪ್ತಗಿರಿ ಮೆಡಿಕಲ್ ಕಾಲೇಜ್, ಬೆಂಗಳೂರಿನ ತಂಡವನ್ನು 3–0 ಅಂತರದಲ್ಲಿ ಮಣಿಸಿ ಫೈನಲ್‌ಗೆ ಪ್ರವೇಶಿಸಿತು. ನಂತರ ನಡೆದ ಅಂತಿಮ ಘಟ್ಟದಲ್ಲಿ ಆರ್.ಆರ್. ಅಂಬೇಡ್ಕರ್ ಮೆಡಿಕಲ್ ಕಾಲೇಜ್, ಕಲ್ಬುರ್ಗಿ ತಂಡವನ್ನು 3–1 ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಸ್ಪರ್ಧೆಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಉಜಿರೆ ಕಾಲೇಜಿನ ಎರಡು ವಿದ್ಯಾರ್ಥಿನಿಯರು ದಕ್ಷಿಣ ಭಾರತ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ ಎಂಬುದು ಕಾಲೇಜು ವಲಯದಲ್ಲಿ ಹರ್ಷವನ್ನುಂಟುಮಾಡಿದೆ.

ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ತಂಡದ ಸಾಧನೆಯನ್ನು ಶ್ಲಾಘಿಸಿದ್ದಾರೆ.

Related posts

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya
error: Content is protected !!