September 6, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

ಬೆಳ್ತಂಗಡಿ: ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕಟ್ಟದಬೈಲು, ಓಡಿಲ್ನಾಳ ಇದರ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಕಲ್ಲೋಟ್ಟು ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ದೀಪಾ ಎಸ್ ಮೇಚೆರಿ ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಶಾಲೆಯ ಬಹು ಮುಖ್ಯ ಆಶೋತ್ತರಗಳ ಈಡೇರಿಕೆಗಾಗಿ ಶ್ರಮಿಸುತ್ತೇನೆಂದು ಭರವಸೆ ನೀಡಿದರು.

ಸರ್ಕಾರದ ಸುತ್ತೋಲೆಯಂತೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕಟ್ಟದಬೈಲು ಇಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೋಷಕ ಶಿಕ್ಷಕರ ಮಹಾಸಭೆ ನಡೆಯಿತು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪ್ರಭಾರ ಮುಖ್ಯೋಪಾಧ್ಯಾಯಿನಿ ಶ್ರೀಮತಿ. ಶಾಂತಿ ಡಿಸೋಜ ಇವರು ನೀಡಿದರು. ನಿರೂಪಣೆಯನ್ನು ಆಂಗ್ಲ ಭಾಷಾ ಪದವೀಧರ ಶಿಕ್ಷಕರಾದ ಎಮ್.ವಿ ಹಿರೇಮಠ ಇವರು ಮಾಡಿದರು. ಮಕ್ಕಳ ಹಕ್ಕುಗಳ ಬಗ್ಗೆ ಪದವೀಧರ ಶಿಕ್ಷಕಿಯಾದ ಶ್ರೀಮತಿ ಭವ್ಯ ಇವರು ಪೋಷಕರಿಗೆ ಮಾಹಿತಿ ನೀಡಿದರು.

ವರ್ಗಾವಣೆಗೊಂಡ ಸಹ ಶಿಕ್ಷಕ ಪಿ ಶಿವಾನಂದ ಭಂಡಾರಿ, ಸಹ ಶಿಕ್ಷಕಿ ಶ್ರೀಮತಿ ಜಯಶ್ರೀ, ವಯೋ ನಿವೃತ್ತಿ ಹೊಂದಿದ ಅಡುಗೆ ಸಹಾಯಕಿ ಶ್ರೀಮತಿ ಡೀಕಮ್ಮ ಮತ್ತು ಮಾಜಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿದ್ದ ಶೇಖರ ಪೆಜತ್ತಕಾಡು ಇವರಿಗೆ ಶಾಲೆಯ ಪರವಾಗಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಗೌರವ ಶಿಕ್ಷಕಿಯರಾದ ಶ್ರೀಮತಿ ಭಾಗೀರಥಿ, ಶ್ರೀಮತಿ ಅಶ್ವಿನಿ ಮತ್ತು ಶ್ರೀಮತಿ ಜಯಶ್ರೀ ಇವರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ಎಕ್ಸೆಲ್‌ನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya
error: Content is protected !!