ಬೆಳ್ತಂಗಡಿ : ನಾವೂರು ಗ್ರಾಮದಲ್ಲಿ ಹೊಡಿಕ್ಕಾರು ಸಂಪರ್ಕ ರಸ್ತೆಯ ತೀರಾ ಹದಗೆಟ್ಟಿದ್ದು ಕಾಮಗಾರಿಯ ಕೆಲಸವು ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡು ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರ್ಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಜಲ್ಲಿ ಹಾಕಿದ ರಸ್ತೆಯ ಬಳಿ ಪರ್ಯಾಯ ರಸ್ತೆ ನಿರ್ಮಾಣ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಊರಿನ ಜನರೇ ಹಣ ಸಂಗ್ರಹಿಸಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.











