38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ವೇದಿಕೆಯಲ್ಲಿ, ಪ್ರಾಂಶುಪಾಲ ವಂ.ಫಾ ವಿಜಯ್ ಲೋಬೋ, ಶಾಲಾ ನಾಯಕಿಯರಾದ ಸಿಂಚನ ಮತ್ತು ಮಿಷೆಲ್ ಪಿಂಟೊ ಉಪಸ್ಥಿತರಿದ್ದರು.

ಮುಖ್ಯ ಅತಿಥಿ ಪ್ರಭಾತ ಸ್ಟೋರ್ ಮಾಲಕ ಪ್ರವೀಣ್ ಭಟ್ ಮಾತನಾಡಿ ಮಕ್ಕಳು ನಮ್ಮ ರಾಷ್ಟ್ರದ ಭವಿಷ್ಯ. ಅವರಲ್ಲಿ ಸೃಜನಶೀಲತೆ, ಮೌಲ್ಯಗಳು ಹಾಗೂ ಆತ್ಮವಿಶ್ವಾಸ ಬೆಳೆಸುವುದು ಶಾಲೆಯ ಹೊಣೆಗಾರಿಕೆ ಎಂದು ಹೇಳಿದರು.

ಶಾಲಾ ಸಂಚಾಲಕ ವಂ.ಫಾ. ಅಬೆಲ್ ಲೋಬೊ ಮಕ್ಕಳ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರಿಂದ ಮಕ್ಕಳಿಗೆ ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲಾಗಿದ್ದು, ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.

ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಸಹಶಿಕ್ಷಕಿಯರಾದ ಕೀರ್ತಿಕ ಸ್ವಾಗತಿಸಿ, ನಿಶಾ ನಿರೂಪಿಸಿ, ರಕ್ಷಾ ವಂದಿಸಿದರು.

Related posts

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya
error: Content is protected !!