ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕ ಶೀನಪ್ಪ ಗೌಡ ವಹಿಸಿ, ಮಕ್ಕಳ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಮುಖ್ಯ ಅತಿಥಿ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕ ದಿವಾಕರ ಗೌಡ ಮುಚ್ಚಾರು ಮಾತನಾಡಿ ಮಕ್ಕಳ ದಿನಾಚರಣೆ ಎಂದರೆ ಮಕ್ಕಳಿಗೆ ಒಂದು ಸಂತೋಷದ ದಿನ ಈ ದಿನವನ್ನು ಎಲ್ಲಾ ವಿದ್ಯಾರ್ಥಿಗಳು ಸಂತೋಷದಿಂದ ಕಳೆಯಬೇಕು ಎಂದು ಅಭಿಪ್ರಾಯಪಟ್ಟರು.

ಶಿಕ್ಷಕ ಗೌರೀಶ್ ಇವರು ಮಕ್ಕಳ ದಿನಾಚರಣೆಯ ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಆಯೋಜಿಸಲಾಗಿದ್ದ ಗೂಡುದೀಪ ಸ್ಪರ್ಧೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕರಾದ ನಿಶಾಂತ್ ಕುಮಾರ್ ಸ್ವಾಗತಿಸಿ, ಕುಮಾರಿ ಜಿತಿಕ್ಷ ವಂದಿಸಿ, ಶೀಲಾ ಎನ್ ರವರು ನಿರೂಪಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಪುಷ್ಪಲತಾ ನೆರವೇರಿಸಿದರು.

Related posts

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya
error: Content is protected !!