ಮಡಂತ್ಯಾರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇನ್ನಿತರ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ, ಡಾ.ಎಂ ಎನ್ ರಾಜೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭ ನ.14 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು.

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ ಸಹಕಾರಿ ಧ್ವಜಾರೋಹಣವನ್ನು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೋಯಲ್ ಮೆಂಡೋನ್ಸಾ ನೆರವೇರಿಸಿದರು.
ಶಾಸಕ ಹರೀಶ್ ಪೂಂಜರವರು ಸಹಕಾರಿ ಸಪ್ತಾಹವನ್ನು ಉದ್ಘಾಟಿಸಿ ಶುಭ ಕೋರಿದರು.

ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪಿ.,ದ.ಕ. ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ಪ್ರಭಾಕರ ಅರಂಬೋಡಿ, ದ.ಕ.ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಹೆಚ್. ಎನ್. ರಮೇಶ್,ದ.ಕ. ಜಿಲ್ಲೆ ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಎಸ್.ಎಂ. ರಘು, ಬೆಳ್ತಂಗಡಿ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್, ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ರೂಪ ನವೀನ್ ಅಧ್ಯಕ್ಷರು,ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ನ ಪ್ರಧಾನ ಧರ್ಮಗುರು ರೆ.ಫಾ.ಡಾ. ಸ್ಟ್ಯಾನಿ ಗೋವಿಯಸ್ ಉಪಸ್ಥಿತರಿದ್ದರು.
ಈ ವೇಳೆ ಉತ್ತಮ ಕೃಷಿಕರಿಗೆ ವಿಶೇಷ ಗೌರವ ಪುರಸ್ಕಾರ, ಉತ್ತಮ ಹೈನುಗಾರಿಕೆ ಸಾಧಕರಿಗೆ ಪುರಸ್ಕಾರ, 3 ಸದಸ್ಯರಿಗೆ ವಿಶೇಷ ಗೌರವ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಶೇಷ ಮನ್ನಣೆ’ ನಡೆಯಿತು.

ಸಪ್ತಾಹದ ವಿಶೇಷತೆಯಾಗಿ ಮೂಡಬಿದ್ರೆ ಶ್ರೀ ಧವಳ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಸಂತೋಷ್ ಶೆಟ್ಟಿ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವುದರ ಬಗ್ಗೆ ವಿಚಾರ ಮಂಡಿಸಿದರು.
ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ನೀಲಯ ಎಂ.ಅಗರಿ , ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ, ಮಡಂತ್ಯಾರು ಸಿಎ ಬ್ಯಾಂಕ್ ಉಪಾಧ್ಯಕ್ಷ ಕಾಂತಪ್ಪ ಗೌಡ, ನಿರ್ದೇಶಕರಾದ ಕೆ. ಅರವಿಂದ್ ಜೈನ್, ಗಣೇಶ್ ಮೂಲ್ಯ, ಮಹಾಬಲ ಕೆ., ಸುರೇಶ್ ಎಸ್., ಗೋಪಾಲಕೃಷ್ಣ ಕೆ., ಧನಲಕ್ಷ್ಮೀ ಜನಾರ್ಧನ್, ಅಮಿತ ಪ್ರಿಯಾ ಲೋಬೊ, ಕುಮಾರ ನಾಯ್ಕ, ಕಿಶೋರ್ ಕುಮಾರ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ,ದ.ಕ ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್, ಸಿಬ್ಬಂದಿ ವರ್ಗ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಹಕರಿಸಿದರು. ಬೆಳ್ತಂಗಡಿ ತಾಲೂಕಿನ ಸೊಸೈಟಿಯ ಹಾಗೂ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಮತ್ತು ಸಿಇಓ , ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಪುರಾತನ ಕೃಷಿ ಸಾಮಾಗ್ರಿ ವಸ್ತುಗಳ ಪ್ರದರ್ಶನ, ಆಧುನಿಕ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮಳಿಗೆ, ವಿವಿಧ ಸ್ಟಾಲ್‌ಗಳಲ್ಲಿ ಕೃಷಿ ಮತ್ತು ಇನ್ನಿತರ ಪರಿಕರಗಳ ಪ್ರದರ್ಶನ., ಭವ್ಯ ಮೆರವಣಿಗೆಯಲ್ಲಿ ಚೆಂಡೆ, ವಾದ್ಯ, ಕೀಲುಕುದುರೆ ಹಾಗೂ ವಿವಿಧ ಸಾಂಸ್ಕೃತಿಕ ಪ್ರದರ್ಶನ ನಡೆಯಿತು.
ಮಡಂತ್ಯಾರು ಸಿಎ ಬ್ಯಾಂಕ್ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ ಸ್ವಾಗತಿಸಿದರು.ಶಿಕ್ಷಕ ಧರಣೇಂದ್ರ ಜೈನ್ ಹಾಗೂ ಫ್ರಾನ್ಸಿಸ್ ವಿ.ವಿ ಕಾರ್ಯಕ್ರಮ ನಿರೂಪಿಸಿದರು.











