July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಜವಾಹರಲಾಲ್ ನೆಹರೂ ರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾಸಂಸ್ಥೆಯ ಶಿಕ್ಷಕ ವೃಂದದವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಮಕ್ಕಳೆಲ್ಲರಿಗೂ ಶುಭಾಶಯಗಳನ್ನು ಕೋರಿ,ವಿದ್ಯಾರ್ಥಿಗಳು ಪ್ರತಿನಿತ್ಯ ಕ್ರಿಯಾಶೀಲರಾಗಿದ್ದು ,ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಮಹತ್ವವನ್ನು ತಿಳಿಸಿದರು.

ಸಂಸ್ಥೆಯ ಎಲ್ಲಾ ಶಿಕ್ಷಕ ಶಿಕ್ಷಕಿಯರು ಹಾಡಿನ ಮೂಲಕ ನೆರೆದಿದ್ದ ಎಲ್ಲಾ ಮಕ್ಕಳಿಗೆ ಪ್ರೀತಿಯ ಶುಭಾಶಯಗಳನ್ನು ತಿಳಿಸಿದರು.

ಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ವಿಜಯ ಮಕ್ಕಳನ್ನು ಉದ್ದೇಶಿಸಿ ಶಿಸ್ತು,ಪರಿಶ್ರಮ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ವಿವರಿಸಿದರು.

ಶಾಲಾ ನಾಯಕಿ ದಿನಾಚರಣೆಯ ಕುರಿತಾಗಿ ಭಾಷಣದ ಮೂಲಕ ತನ್ನ ಅಭಿಪ್ರಾಯವನ್ನು ಹಂಚಿಕೊಂಡರು.

ಪ್ರಾಂಶುಪಾಲರು,ಸಂಯೋಜಕರಾದ ಯಶವಂತ್ ಜಿ ನಾಯಕ್ ಹಾಗೂ ಮುಖ್ಯಶಿಕ್ಷಕಿ ಯವರ ಜತೆಗೂಡಿ ಉಳಿದ ಎಲ್ಲ ಶಿಕ್ಷಕರು ನೆಹರೂರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಿದರು. ಮಕ್ಕಳೆಲ್ಲರೂ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.
ಸಹಶಿಕ್ಷಕರಾದ ಪ್ರಶಾಂತ್ ಕೆ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಪ್ರಿಯತ ಸ್ವಾಗತಿಸಿ ,ದಿವ್ಯ ಕೆ ವಂದಿಸಿದರು.

ಮಕ್ಕಳ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ತರಗತಿವಾರು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಮಕ್ಕಳೆಲ್ಲರೂ ಉತ್ಸಾಹದಿಂದ ಪಾಲ್ಗೊಂಡರು.ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಅರ್ಥ ಪೂರ್ಣವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮವು ಸಂಪನ್ನಗೊಂಡಿತು.

Related posts

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!