25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 13ನೇ ವರ್ಷದ ಪಾದಯಾತ್ರೆ ನ.15ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡ್ವೆಟ್ನಾಯ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಕೆ.ಹರಿಶ್ ಕುಮಾರ್, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡ, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾಯ೯ದಶಿ೯ ಡಾ.ಸತೀಶ್ಚಂದ್ರ,‌
ಪ್ರಾಚಾಯ೯ ವಿಶ್ವನಾಥ್, ಪೂರಣ್ ವಮ೯, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಸಿಯೋನ್ ಆಶ್ರಮ ಟ್ರಸ್ಟ್ ನ ಯು.ಸಿ ಪೌಲೋಸ್ ಗಂಡಿಬಾಗಿಲು, ಅಖಿಲ ಕರ್ನಾಟಕ ಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ತಾಲೂಕು ಅಧ್ಯಕ್ಷೆ ಕಾಸಿಂ ಮಲ್ಲಿಗೆ ಮನೆ, ಸಿರಿ ಸಂಸ್ಥೆಯ ನಿರ್ದೇಶಕ ಕೆ.ಎನ್ ಜನಾರ್ದನ್, ಉದ್ಯಮಿ ಮೋಹನ ಶೆಟ್ಟಿಗಾರ್, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್, ಡಾ. ಎಲ್.ಹೆಚ್ ಮಂಜುನಾಥ್, ಚಂದ್ರಶೇಖರ ಸಾ
ಸಂತೋಷ್ ಕುಮಾರ್ ಕಾಪಿನಡ್ಕ, ಉದ್ಯಮಿ ರಾಘವೇಂದ್ರ ಬೈಪಾಡಿತ್ತಾಯ, ಸಂಧ್ಯಾ ಟ್ರೇಡರ‍್ಸ್‌ನ ರಾಜೇಶ್ ಪೈ, ಪ್ರಶಾಂತ್ ಜೈನ್ ಅಮೃತ್ ಟೆಕ್ಸ್ಟೈಲ್ಸ್, ಪ್ರಭಾಕರ ಜೈನ್ ಮಹಾವೀರ ಸಿಲ್ಕ್, ವತ೯ಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್, ರವೀಂದ್ರ ಶೆಟ್ಟಿ ಬಳಂಜ, ಉದ್ಯಮಿ ಅರವಿಂದ್ ಕಾರಂತ್, ರವಿ ಚಕ್ಕಿತ್ತಾಯ, ಗ್ರಾ.ಪಂ ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ,
ಶಾಂತ ಬಂಗೇರ, ಕಿರಣ್ ಶೆಟ್ಟಿ ಜೈನಪೇಟೆ, ಶೀತಲ್ ಜೈನ್ ಪೌರನ್, ಹರಿಯಂತ ಜೈನ್ ಬೆಳ್ತಂಗಡಿ ಅಜೇಯ್ ಶೆಟ್ಟಿ ಉಜಿರೆ, ಪದ್ಮಪ್ರಸಾದ್ ಜೈನ್ ಧಮ೯ಸ್ಥಳ ,‌ಪ್ರಿಯಾಂಕ ಜೈನ್ ಧಮ೯ಸ್ಥಳ, ಮಮತಾ ಎಂ. ಶೆಟ್ಟಿ, ರಾಜಶೇಖರ ಅಜ್ರಿ, ಶ್ರಿಧರ ಕೆ.ವಿ ಉಜಿರೆ, ಶಶಿಧರ ಕಲ್ಮಂಜ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ| ಶ್ರೀನಾಥ್, ನ್ಯಾಯವಾದಿ ಧನಂಜಯ ರಾವ್, ಸೀತಾರಾಮ ಬಿ.ಎಸ್ ಬೆಳಾಲ್, ಜಯಂತ್ ಶೆಟ್ಟಿ ಕುಂಟಿನಿ, ತಿಮ್ಮಪ್ಪ ಗೌಡ ಬೆಳಾಲು, ಪುಷ್ಪರಾಜ ಹೆಗ್ಡೆ, ವಸಂತ ಮಜಲು, ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷ ರವಿ ಬರೇಮೇಲು, ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ, ಜಯಪ್ರಕಾಶ್ ಶೆಟ್ಟಿ ಉಜಿರೆ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರುಗಳಾದ, ಡಿ.ಎ ರಹಿಮಾನ್, ತಿಮ್ಮಪ್ಪ ಗೌಡ, ಕಿಶೋರ್ ಹೆಗ್ಡೆ, ಯದುಪತಿ ಗೌಡ, ಸತೀಶ್ ಕಾಮತ್ ಕಡಿರುದ್ಯಾವರ, ಈಶ್ವರ ಬೈರಾ, ಹತ್ಯಡ್ಕ ಸಿ.ಎ ಬ್ಯಾಂಕ್ ಅಧ್ಯಕ್ಷ ರಾಘವೇಂದ್ರ ನಾಯಕ್, ಅವಿನಾಶ್ ಅಗ್ರೀಲಿಫ್, ಡಾ. ಪ್ರದೀಪ್ ನಾವೂರು, ತಾಲೂಕಿನ ಗಣ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ನಾಗರಿಕರು, ಹೆಗ್ಗಡೆ ಅಭಿಮಾನಿಗಳು ಮೆರವಣಿಗೆಯ ಜೊತೆ ಸಾಗಿದರು.

ಟ್ಯಾಬ್ಲೋ, ವಿವಿಧ ಯಕ್ಷಗಾನ ವೇಷ ಭೂಷಣಗಳು, ಭಜನಾ ತಂಡಗಳು, ಗ್ರಾಮಾಭಿವೃದ್ಧಿ ಯೋಜನೆಯ ವಲಯಗಳಿಂದ ಬಂದ ಕಾರ್ಯಕರ್ತರು, ವಿಪತ್ತು ನಿರ್ವಹಣಾ ತಂಡ, ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡ, ವಿವಿಧ ಸಂಘ ಸಂಸ್ಥೆಯವರು ಪಾದಯಾತ್ರೆಯಲ್ಲಿ ಶಿಸ್ತಿನಿಂದ ಭಾಗವಹಿಸಿದರು. ಚೆಂಡೆ, ವಾದ್ಯ, ಸಮವಸ್ತ್ರಧಾರಿ ಭಕ್ತರು, ಯಕ್ಷಗಾನ ವೇಷಧಾರಿಗಳು, ಭಜನಾ ತಂಡಗಳ ಕುಣಿತ ಭಜನೆ ಪಾದಯಾತ್ರೆಯ ವಿಶೇಷ ಆಕರ್ಷಣೆಯಾಗಿತ್ತು.


ಉಜಿರೆ ದೇವಸ್ಥಾನದ ವಠಾರದಲ್ಲಿ ಮಧ್ಯಾಹ್ನ ಶ್ರೀ ಭಗವಾನ್ ಶಿರಡಿಸಾಯಿ ಸತ್ಯಸಾಯಿ ಸೇವಾ ಕ್ಷೇತ್ರ ಹಳೆಕೋಟೆ ಬೆಳ್ತಂಗಡಿ ಇವರಿಂದ ಭಜನಾ ಸಂಕಿರ್ತನೆ ನಡೆಯಿತು.

Related posts

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!