September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಪೆರ್ಲ ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025ನೇ ಸಾಲಿನ ಕುಪ್ಪೆಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡುಗೈ ದಾನಿಗಳಾದ ಜಯಣ್ಣಗೌಡ ಮೀನಾಂದೇಲು ಉದ್ಘಾಟಿಸಿ ಶುಭ ಹಾರೈಸಿ, ಕಾರ್ಯಕ್ರಮಕ್ಕೆ ಹತ್ತು ಸಾವಿರ ರೂಪಾಯಿ ಸಹಾಯಧನನ್ನು ನೀಡಿದರು.
ಕಾರ್ಯಕ್ರಮದಲ್ಲಿ ದಾನಿಗಳಾದ ತಿಮ್ಮಪ್ಪ ಗೌಡ ಸೋಣಕುಮೇರು, ಗ್ರಾಮ ಪಂಚಾಯಿತಿ ಸದಸ್ಯರಾದ ಅನಿತ ಕೆ ಹಾಗೂ ಭಾರತಿ ಕೆ ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಸಹ ಶಿಕ್ಷಕ ವಿಜಯ ಕುಮಾರ ಇವರನ್ನು ಗೌರವಿಸಲಾಯಿತು.


ವಿವಿಧ ಕೊಠಡಿಗಳಲ್ಲಿ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳು ಜರುಗಿದ್ದು ಈ ಸ್ಪರ್ಧೆಗಳಲ್ಲಿ 16 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮೈರೋಲ್ತಡ್ಕದ ವಿದ್ಯಾರ್ಥಿಗಳು ಪಡೆದುಕೊಂಡರೆ ದ್ವಿತೀಯ ಸಮಗ್ರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪದ್ಮುಂಜದ ವಿದ್ಯಾರ್ಥಿಗಳು ಪಡೆದುಕೊಂಡರು. ಹಿರಿಯರ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಶ್ರೀ ಭಾರತಿ ಉರುವಾಲು, ದ್ವಿತೀಯ ಸಮಗ್ರವನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಲ್ತಡ್ಕ ಪಡೆದುಕೊಂಡಿದೆ.

Related posts

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya
error: Content is protected !!