37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

ಪುಂಜಾಲಕಟ್ಟೆ : ಕೆಪಿಎಸ್ ಪುಂಜಾಲಕಟ್ಟೆಯ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಮಕ್ಕಳ ದಿನಾಚರಣೆಯ ಶುಭಾಶಯ ಕೋರುತ್ತಾ ಮಕ್ಕಳ ಸಾಮಾಜಿಕ ಜವಾಬ್ದಾರಿಗಳ ಬಗ್ಗೆ ಮಾತನಾಡುತ್ತ ತಂದೆ ತಾಯಿ ಮತ್ತು ಸಮಾಜದ ಕೊಡುಗೆಯನ್ನು ಸದಾ ಸ್ಮರಿಸುವುದು ಮಕ್ಕಳ ಜವಾಬ್ದಾರಿ ಎಂದು ನೆನಪಿಸಿದರು.

ಮುಖ್ಯ ಅತಿಥಿಯಾಗಿ ದ. ಕ. ಜಿಲ್ಲಾ ಪದವಿ ಪೂರ್ವ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನವೀನ್ ಶೆಟ್ಟಿ ಕೆ, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಯರಾಮ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ ಉಪಸ್ಥಿತರಿದ್ದರು. ದತ್ತಿ ಬಹುಮಾನ, ಆಟೋಟ ಸ್ಪರ್ಧೆ, ಕಲಿಕಾ, ಮತ್ತು ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ವಿಜೇತರಾದ ವಿದ್ಯಾರ್ಥಿ ಗಳನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪೋಷಕ ರಕ್ಷಕ ಸಭೆ ನಡೆಸಲಾಯಿತು. ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಹೈಸ್ಕೂಲ್ ಪ್ರಭಾರ ಉಪಾಪ್ರಾಂಶುಪಾಲರಾದ ನಿರಂಜನ್ ಜೈನ್ ಮತ್ತು ಶಾಲಾಭಿವೃದ್ಧಿ ಸದಸ್ಯರಾದ ದಿವಾಕರ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya
error: Content is protected !!