September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

ಧರ್ಮಸ್ಥಳ: ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂಗವಾಗಿ ಧರ್ಮಸ್ಥಳದ ಪ್ರೌಢ ಶಾಲಾ ವಠಾರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಮಟ್ಟದ ವಸ್ತು ಪ್ರದರ್ಶನದ ಪ್ರತಿ ಸ್ಟಾಲ್‌ಗಳನ್ನು ವೀಕ್ಷಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುರ್ಯಗುತ್ತು, ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್, ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ಎನ್. ಜನಾರ್ದನ್, ಎಸ್‌ಡಿಎಂ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಜನಾರ್ದನ್, ಹೆಗ್ಗಡೆಯವರ ಆಪ್ತ ಸಹಾಯಕ ವೀರೂ ಶೆಟ್ಟಿ , ಅನಂತ ಭಟ್ ಮಚ್ಚಿಮಲೆ, ಯತೀಶ್ ಬಳೆಂಜ
ಮೊದಲಾದವರು ಭಾಗವಹಿಸಿದ್ದರು.

ವಸ್ತುಪ್ರದರ್ಶನ ಉದ್ಘಾಟನೆಗೆ ಖಾವಂದರ ನೆಚ್ಚಿನ ಕಾರುನಲ್ಲಿ ಜೊತೆ ಪ್ರಯಾಣಿಸಿದ ಶಾಸಕರು

ವಸ್ತುಪ್ರದರ್ಶನದಲ್ಲಿ 350ಕ್ಕೂ ಹೆಚ್ಚು ಮಳಿಗೆಗಳಿದ್ದು, ಅಪೂರ್ವ ಮಾಹಿತಿ, ಮಾರ್ಗದರ್ಶನದ ಕಣಜವಾಗಿದೆ. ಕೃಷಿ, ಹೈನುಗಾರಿಕೆ, ಬ್ಯಾಂಕಿಂಗ್, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಹಾಗೂ ಮಹಿಳಾ ಕಲ್ಯಾಣ ಇಲಾಖೆ, ಜೀವ ವಿಮೆ, ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಡಿಕೆ ಹಾಳೆತಟ್ಟೆ ತಯಾರಿ, ಮಡಕೆ ತಯಾರಿ, ಗ್ರಾಮೀಣ ಕರಕುಶಲ ಕಲೆಗಳ ಮಳಿಗೆಗಳು ಜನರನ್ನು ಆಕರ್ಷಿಸುತ್ತಿವೆ. ನ. 20 ರವರೆಗೆ ಪ್ರತಿದಿನ ಬೆಳಿಗ್ಗೆ 9ರಿಂದ ರಾತ್ರಿ 10 ವರೆಗೆ ವಸ್ತುಪ್ರದರ್ಶನ ವೀಕ್ಷಣೆಗೆ ಅವಕಾಶವಿದೆ. ಪ್ರತಿದಿನ ಸಂಜೆ 6 ಗಂಟೆಯಿಂದ ವಸ್ತುಪ್ರದರ್ಶನ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Related posts

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!