September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆಯ ಅಂಗವಾಗಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಚಿಣ್ಣರ ಕಲರವ- ಕ್ರೀಡಾಸಂಗಮ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು .

ಉದ್ಘಾಟನಾ ಕಾರ್ಯಕ್ರಮದಲ್ಲಿ ವo. ಸ್ವಾಮಿ ಜೆರೋಮ್ ಡಿಸೋಜಾ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಅಂತರರಾಷ್ಟ್ರೀಯ ತ್ರೋಬಾಲ್ ಆಟಗಾರ್ತಿ , ಕುಮಾರಿ ವಿಲೋನ ಡಿಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ, ಕಾರ್ಯದರ್ಶಿ ಶ್ರೀಮತಿ ಎವಿಜಿನ್ ರೋಡ್ರಿಗಸ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಸಂತ ಅಂತೋನಿ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಸಲ್ದಾನ, ನಾರಾವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲಕೃಷ್ಣ ತುಳುಪುಳೆ, ಸಂತ ಪಾವಲರ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರಿಚರ್ಡ್ ಮೊರಸ್, ಸಂತ ಪಾವಲರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸೋಫಿಯಾ ಪೆರ್ನಾಂಡಿಸ್, ಪದವಿ ಕಾಲೇಜಿನ ಉಪನ್ಯಾಸಕರಾದ ವo. ಸ್ವಾಮಿ ರೂಪೇಶ್ ತಾವ್ರೊ ಉಪಸ್ಥಿತರಿದ್ದರು.

ಗೋಪಾಲಕೃಷ್ಣ ತುಳುಪುಳೆ ಸ್ವಾಗತಿಸಿ, ರಿಚರ್ಡ್ ಮೊರಸ್ ವಂದಿಸಿದರು. ಶಿಕ್ಷಕಿ ರೆನಿಟಾ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಎಲ್ ಕೆ ಜಿ ಯಿಂದ ಪದವಿ ತರಗತಿಯವರೆಗೆ ಎಲ್ಲಾ ಮಕ್ಕಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಹಾಗೂ ತ್ರೋಬಾಲ್ ಪಂದ್ಯಗಳು ಎಲ್ಲರ ಮನಸೂರೆಗೊಂಡವು. ಶಾಲಾ ಮೈದಾನದಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೆ ಮಿತದರದಲ್ಲಿ ಆಹಾರ ಮೇಳವನ್ನು ಏರ್ಪಡಿಸಲಾಗಿತ್ತು.

Related posts

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!