March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಕ್ಕಳ ದಿನಾಚರಣೆಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕೋಶಾಧಿಕಾರಿಯಾದ ಸಯ್ಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು. ಪ್ರಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯನಿ “ಈ ಹಬ್ಬದ ವಾತಾವರಣ ಮತ್ತು ಖುಷಿ ನಿಮ್ಮ ಜೀವನದಲ್ಲಿ ಸದಾ ಇರಲಿ ಮತ್ತು ನೆಹರೂ ರವರ ಜೀವನದ ಸಾಧನೆ ಮತ್ತು ತ್ಯಾಗವನ್ನು ತಿಳಿಸುತ್ತಾ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.

ಪ್ರಸ್ತುತ ಶೈಕ್ಷಣಿಕ ವರ್ಷದ ಕೆಲವೊಂದು ವಿದ್ಯಾರ್ಥಿಗಳ ವಿಶೇಷ ಗುಣ ಹಾಗೂ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸ್ಮರಣೆಕೆಯನ್ನು ನೀಡಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷರು ಮಾತನಾಡಿ ” ಮಕ್ಕಳು ತಮ್ಮ ತಂದೆ ತಾಯಿಗೆ ಗೌರವ ಸಲ್ಲಿಸುವುದನ್ನು ಮರೆಯಬಾರದು ಜೊತೆಗೆ ಶಿಕ್ಷಣವನ್ನು ನೀಡಿದ ಗುರುಗಳನ್ನು ಎಂದಿಗೂ ಗೌರವಿಸಬೇಕು ” ಎಂದು ಹೇಳುತ್ತಾ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಾಲೆಯ ಸಹಶಿಕ್ಷಕಿ ಶ್ರೀಮತಿ ಯಶಸ್ವಿನಿ ಇವರು ಶಿಕ್ಷಕ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಹತ್ತನೆಯ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಫ್ ಸಿಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಎಂಟನೇ ತರಗತಿಯ ವಿದ್ಯಾರ್ಥಿ ಅನಝ್ ಅತಿಥಿಗಳನ್ನು ಸ್ವಾಗತಿಸಿದರು. 6ನೇ ತರಗತಿಯ ಅರ್ಷದ ಧನ್ಯವಾದವನ್ನು ನೀಡಿದರು.

Related posts

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya
error: Content is protected !!