23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಡಿಸೆಂಬರ್ 24 ,25 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರದ ದೈವಗಳ ನರ್ತನ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಈ ಬಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರುರವರು ವಹಿಸಿ, ಸಭೆಯಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ನೋಟರಿ ವಕೀಲರು, ಕ್ಷೇತ್ರದ ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಲ, ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ದುರ್ಗ ಪ್ರಸಾದ್ ಕೆರ್ಮುಣ್ಣಾಯ ,ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ್ ಗೌಡ , ಭಜನ ಮಂಡಳಿಯ ಅಧ್ಯಕ್ಷ ಹರೀಶ್ ಪೋಸಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಆರ್ಥಿಕ ಸಮಿತಿಯ ಸಂಚಾಲಕರಾದ ಶಿವಕುಮಾರ್ ಬಾರಿತ್ತಾಯ, ಸಿಂಧೂರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ನಿಶಾ ಬನಂದೂರು, ವ್ಯವಸ್ಥಾಪನ ಸಮಿತಿಯ ಸದಸ್ಯರು, ಬೈಲುವಾರು ಸಮಿತಿಯ ಪ್ರಧಾನ ಸಂಚಾಲಕರು ಹಾಗೂ ಸಂಚಾಲಕರು, ಮಹಿಳಾ ಸಮಿತಿಯ ಸದಸ್ಯರು ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಕೀಲರ ಸಂಘ ಬೆಳ್ತಂಗಡಿ ಇದರ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ಇವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ಸಮಿತಿಯ ಕಾರ್ಯದರ್ಶಿಯಾದ ಸತೀಶ್ ಗೌಡ ಎಳ್ಳುಗದ್ದೆ ಸ್ವಾಗತಿಸಿ, ದೇವಸ್ಥಾನದ ಮ್ಯಾನೇಜರ್ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
error: Content is protected !!