23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು (ನ.17) ಪ್ರಕಟಿಸಿತು.

ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಪೀಠ, ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶ ರದ್ದುಪಡಿಸಿ‌ ಆದೇಶ ನೀಡಿದೆ. ಅಲ್ಲದೆ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ 15 ದಿನದೊಳಗೆ ಸೂಕ್ತ ಆದೇಶ ಹೊರಡಿಸುವಂತೆಯೂ ಎರಡನೇ ಪ್ರತಿವಾದಿಯಾದ ಪುತ್ತೂರು ಸಹಾಯಕ ಆಯುಕ್ತರಿಗೆ ನ್ಯಾಯಪೀಠ ನಿರ್ದೇಶಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!