September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

ಬೆಳ್ತಂಗಡಿ: ಎಸ್ಐಟಿ ದಾಳಿ ವೇಳೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಒಂದು ಅಕ್ರಮ ಬಂದೂಕು ಮತ್ತು ಎರಡು ತಲವಾರು ಪತ್ತೆಯಾದ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಪ್ರಕರಣಕ್ಕೆ ಮಧ್ಯಂತರ ತಡೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನ.17 ರಂದು(ಇಂದು) ನಡೆಯಲಿದೆ.

ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ತಿಮರೋಡಿ ಮಹೇಶ್ ಶೆಟ್ಟಿ ಮನೆಗೆ ದಾಳಿ ಮಾಡಿದಾಗ ಒಂದು ಬಂದೂಕು ಮತ್ತು ಎರಡು ತಲವಾರು ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣದಲ್ಲಿ ಜಿಲ್ಲಾ ಕೋರ್ಟ್ ಅರ್ಜಿ ವಜಾ ಮಾಡಿತ್ತು. ಬಳಿಕ ಹೈ ಕೋರ್ಟ್ ನಲ್ಲಿ ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು‌. ಈ ಅರ್ಜಿಗೆ ಮುಂದಿನ ವಿಚಾರಣೆವರೆಗೆ ಮಧ್ಯಂತರ ತಡೆ ನೀಡಿತ್ತು.

ಒಂದು ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗಿಸ್ ಸೆ.18 ರಂದು (18-09-2025 ರಿಂದ 17-09-2026 ರವೆಗೆ) ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು.
ಈ ಆದೇಶದ ವಿರುದ್ಧ ತಿಮರೋಡಿ ವಕೀಲರ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್ ಗೆ ಮೊರೆ ಹೋಗಿದ್ದರು. ಆದರೆ ಅ.9 ರಂದು ಜಿಲ್ಲಾ ಕೋರ್ಟ್ ನಲ್ಲಿ ಅರ್ಜಿ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ಸೆ.29 ರಂದು ಗಡಿಪಾರು ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅ.13 ರಂದು ವಿಚಾರಣೆ ನಡೆಸಿ ತಿಮರೋಡಿ ಮೇಲೆ ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಬೇಡ ಎಂದು ಸೂಚನೆ ನೀಡಿ ಗಡಿಪಾರು ಪ್ರಕರಣದ ಆದೇಶವನ್ನು ಕಾಯ್ದಿರಿಸಿತ್ತು.

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣದ ಆದೇಶದ ಭವಿಷ್ಯ ನ.17 ರಂದು(ಇಂದು) ಹೈ ಕೋರ್ಟ್ ನಲ್ಲಿ ಹೊರಬೀಳಲಿದೆ.

Related posts

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya
error: Content is protected !!