27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು.

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರೌಢಶಾಲಾ ವಿಭಾಗದಲ್ಲಿ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಸ್ವಸ್ತಿಶ್ರೀ ಪ್ರಥಮ ಸ್ಥಾನ ಹಾಗೂ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya
error: Content is protected !!