24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಇಲ್ಲಿನ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯುವ ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಕನಾ೯ಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ ಪಾಟೀಲ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠಂ ಹರಿಹರಪುರಂನ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ವಹಿಸಿದ್ದರು. ಉಪನ್ಯಾಸಕರಾದ ರಾಷ್ಟ್ರೀಯ ಚಿಂತಕ ತನ್ವೀರ್ ಅಹಮದ್ ಬೆಂಗಳೂರು ಹಾಗೂ ಪ್ರಜಾವಾಣಿ ಉಪ ಸಂಪಾದಕ ಸೂರ್ಯಪ್ರಕಾಶ ಪಂಡಿತ್ , ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,ಡಿ.ಸುರೇಂದ್ರ ಕುಮಾರ್, ಡಿ.ಹಷೇಂದ್ರ ಕುಮಾರ್, ಶ್ರೀಮತಿ ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಕೃತಿ ‘ಮಗಳಿಗೊಂದು ಪತ್ರ’ ಹಾಗೂ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಕೃತಿ ‘ಧಮ೯ದಶ೯ನ’ ಪುಸ್ತಕವನ್ನು ಅನಾವರಣ ಗೊಳಿಸಲಾಯಿತು.ಸುನೀಲ್ ಪಂಡಿತ್ ಹಾಗೂ ಶ್ರದ್ಧಾ ಅಮಿತ್ ಸನ್ಮಾನಿತರ ಪುತ್ರ ‌ವಾಚಿಸಿದರು. ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಡಾ. ಹೆಗ್ಗಡೆಯವರು ಸ್ವಾಗತಿಸಿದರು. ಎಸ್ ಡಿ ಎಂ ಪ್ರಾಧ್ಯಾಪಕ ಡಾ.ಶ್ರೀಧರ ಭಟ್ ಸ್ವಾಗತಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya
error: Content is protected !!