25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ನ. 17 ರಂದು ಮಕ್ಕಳ ದಿನಾಚರಣೆಯನ್ನು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾಯಿತು. ಸಹಶಿಕ್ಷಕಿಯಾದ ಶ್ರೀಮತಿ ಮಲ್ಲಿಕಾರವರು ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಡು, ನೃತ್ಯ, ನಾಟಕದ ಮೂಲಕ ಮಕ್ಕಳನ್ನು ಮನರಂಜಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸೈಂಟ್ ಸೆಬ್ಯಾಸ್ಟಿಯನ್ ಚರ್ಚ್ ಗರ್ಡಾಡಿಯ ಧರ್ಮ ಗುರುಗಳಾದ ವಂ|ಸ್ವಾ| ಮ್ಯಾಕ್ಸಿಮ್ ಪೀಟರ್ ಪಿಂಟೋ ರವರು ಆಗಮಿಸಿದ್ದರು ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಹೆತ್ತವರನ್ನು ಮತ್ತು ಶಿಕ್ಷಕರನ್ನು ಗೌರವಿಸಬೇಕು ಎಂದು ಹೇಳಿ ಮಕ್ಕಳ ದಿನಾಚರಣೆಯ ಶುಭಾಶಯಗಳು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸರವರು, ಸೇಕ್ರೆಡ್ ಹಾರ್ಟ್ ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ| ಲ್ಯಾರಿ ಪಿಂಟೋ, ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನ, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ರವೀಂದ್ರ ರೈ , ಮರಿಯ ಕೃಪ ಕಾನ್ವೆಂಟಿನಾ ನಿರ್ದೇಶಕಿಯಾದ ಸಿ|ಹಿಲ್ಡಾ ಮಸ್ಕರೇನಸ್ , ಹಾಗೂ ಶಿಕ್ಷಕರ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕ ವೃಂದದವರು ನಿರೂಪಿಸಿ, ಶ್ರೀಮತಿ ಸ್ಟೆಲ್ಲಾ ಸ್ವಾಗತಿಸಿ, ಶ್ರೀಮತಿ ಅನಿತಾ ಡೇಸ ಧನ್ಯವಾದವನ್ನು ಸಮರ್ಪಿಸಿದರು.

Related posts

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya
error: Content is protected !!