ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಅಂಗವಾಗಿ ಇಲ್ಲಿನ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯುವ ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಕನಾ೯ಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ ಪಾಟೀಲ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠಂ ಹರಿಹರಪುರಂನ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ವಹಿಸಿದ್ದರು. ಉಪನ್ಯಾಸಕರಾದ ರಾಷ್ಟ್ರೀಯ ಚಿಂತಕ ತನ್ವೀರ್ ಅಹಮದ್ ಬೆಂಗಳೂರು ಹಾಗೂ ಪ್ರಜಾವಾಣಿ ಉಪ ಸಂಪಾದಕ ಸೂರ್ಯಪ್ರಕಾಶ ಪಂಡಿತ್ , ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,ಡಿ.ಸುರೇಂದ್ರ ಕುಮಾರ್, ಡಿ.ಹಷೇಂದ್ರ ಕುಮಾರ್, ಶ್ರೀಮತಿ ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಕೃತಿ ‘ಮಗಳಿಗೊಂದು ಪತ್ರ’ ಹಾಗೂ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಕೃತಿ ‘ಧಮ೯ದಶ೯ನ’ ಪುಸ್ತಕವನ್ನು ಅನಾವರಣ ಗೊಳಿಸಲಾಯಿತು.ಸುನೀಲ್ ಪಂಡಿತ್ ಹಾಗೂ ಶ್ರದ್ಧಾ ಅಮಿತ್ ಸನ್ಮಾನಿತರ ಪುತ್ರ ವಾಚಿಸಿದರು. ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಡಾ. ಹೆಗ್ಗಡೆಯವರು ಸ್ವಾಗತಿಸಿದರು. ಎಸ್ ಡಿ ಎಂ ಪ್ರಾಧ್ಯಾಪಕ ಡಾ.ಶ್ರೀಧರ ಭಟ್ ಸ್ವಾಗತಿಸಿದರು.











