July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಕುವೆಟ್ಟು,: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕoದ ಫೋಟೋ ಸ್ಪರ್ಧೆ 2025 ಇದರ ವಿಜೇತರಾದವರಿಗೆ ಬಹುಮಾನ ವಿತರಣೆ ಸಮಾರಂಭ ನ 18 ರoದು ಗುರುವಾಯನಕೆರೆ ಛಾಯಾ ಭವನದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ವಹಿಸಿದ್ದರು ವೇದಿಕೆಯಲ್ಲಿ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ. ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮoಜ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಛಾಯಾ ಕಾರ್ಯದರ್ಶಿ ಸoದೇಶ್ ನಿಡ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದರು ಬಹುಮಾನ ಪಡೆದ ಪುಟಾಣಿ ಮಕ್ಕಳ ಹೆತ್ತವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಥಮ, ದ್ವಿತೀಯ, ತೃತೀಯ ಹಾಗೂ ತೀರ್ಪುಗಾರರು ಮೆಚ್ಚುಗೆ ಗಳಿಸಿದ ಫೋಟೋಗಳಿಗೆ ಸಮಾಧಾನಕರ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಬಹುಮಾನದ ಪ್ರಾಯೋಜಕರಾದ ವಲಯದ ಮಾಜಿ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ಹಾಗೂ ಸುರೇಶ್ ಬಿ ಕೌಡoಗೆ ಇವರನ್ನು ಮತ್ತು ವಿಜೇತರಾದ ಮಕ್ಕಳ ಛಾಯಾ ಚಿತ್ರಗಾರರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು . ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಉಮೇಶ್ ಕುಮಾರ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ ಸ್ವಾಗತಿಸಿ, ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ಹರ್ಷ ಬಳ್ಳಮಂಜ ಧನ್ಯವಾದ ನೀಡಿದರು.

ವರದಿ: ಮನು ಮದ್ದಡ್ಕ

Related posts

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!