September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

ಉಜಿರೆ: ಅಂಕಣಕಾರರಾಗಿ, ಕವಿಯಾಗಿ, ರಾಜಕಾರಣಿಯಾಗಿ, ಉದ್ಯಮಿಯಾಗಿ, ಶಿಕ್ಷಕರಾಗಿ, ವಕೀಲರಾಗಿ ಮತ್ತು ರಾಷ್ಟ್ರೀಯ ಚಿಂತಕರಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ತನ್ವೀರ್ ಅಹಮದ್ ಉಲ್ಲಾ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿದರು.

ಬಳಿಕ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭಿಸಿದ ನನಗೆ ದಾರಿಯುದ್ದಕ್ಕೂ ಧರ್ಮಸ್ಥಳ ವಿಶೇಷವಾಗಿ ಕಾಣಿಸಿತು. ನೊಂದವರ ಕಣ್ಣೀರಿನಲ್ಲಿ ಆಶಾದಾಯಕವಾಗಿ, ಪ್ರೀತಿಸುವವರ ಹೃದಯದಲ್ಲಿ ಪ್ರೀತಿಯಾಗಿ, ಓದುವ ಮಕ್ಕಳ ಪುಸ್ತಕದಲ್ಲಿ, ಮರುಅರಣ್ಯೀಕರಣದ ಮರಗಳ ಗೂಡಿನಲ್ಲಿರುವ ಹಕ್ಕಿಯ ಮರಿಗಳಲ್ಲಿ ನನಗೆ ಪೂಜ್ಯರ ಸಮಾಜ ಸೇವೆಯ ಮೂಲಕ ಧರ್ಮಸ್ಥಳ ಕಂಡಿತು.

ಈ ಆಸ್ಪತ್ರೆಗೆ ಬಂದು ಇಲ್ಲಿನ ಹೈಟೆಕ್ ಸೌಲಭ್ಯವಿರುವ ಡಯಾಲಿಸಿಸ್ ಕೇಂದ್ರದಲ್ಲಿ ಸಿಗುತ್ತಿರುವ ಉಚಿತ ಡಯಾಲಿಸಿಸ್ ಸೇವೆ ನೋಡಿದಾಗ ಧರ್ಮಸ್ಥಳ ನನಗೆ ಒಂದು ಅನನ್ಯ ಕ್ಷೇತ್ರವಾಗಿ ಕಾಣಿಸಿತು. ಪೂಜ್ಯರ ಸಮಾಜ ಸೇವೆಯ ದರ್ಶನವಾಯಿತು. ಧರ್ಮಸ್ಥಳ ಎಂದರೆ ಧರ್ಮ. ಇಲ್ಲಿ ಧರ್ಮ ಪ್ರೀತಿಯಲ್ಲಿದೆ. ತ್ಯಾಗದಲ್ಲಿದೆ. ಸೇವೆಯ ರೂಪದಲ್ಲಿದೆ. ಇಂತಹ ಪುಣ್ಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿರುವ ಸಂಸ್ಥೆಯ ಸಿಬ್ಬಂದಿಗಳು ಧನ್ಯರು. ಭಾವೈಕ್ಯದ ಭಾರತ, ಪ್ರೀತಿಯ ಭಾರತ, ನಮ್ಮಲ್ಲೆರ ಭಾರತವನ್ನು ಕಟ್ಟೋಣ ಎಂದರು.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸ್ಟೋರ್ ಇನ್-ಚಾರ್ಜ್ ಜಗನ್ನಾಥ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ನಾವೂರು ನವೋದಯ ಯುವಕ ಮಂಡಲ ಅಧ್ಯಕ್ಷರಾಗಿ ಸ್ವರೂಪ್ ಶೇಖರ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya
error: Content is protected !!