September 6, 2026
ಚಿತ್ರ ವರದಿತಾಲೂಕು ಸುದ್ದಿವರದಿ

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ನ. 26ರಂದು ಬೆಳಿಗ್ಗೆ ಗಂಟೆ 8 ರಿಂದ ಮಧ್ಯಾಹ್ನ ಗಂಟೆ 12-00ರ ವರೆಗೆ ಮಲೆಬೆಟ್ಟು ಉದ್ಭವ ಶ್ರೀ ಸುಬ್ರಹ್ಮಣೇಶ್ವರ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಉಜಿರೆಯ ಯು. ಶರತ್ ಕೃಷ್ಣ ಪಡುವೆಟ್ನಾಯರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು.

ಬೆಳಿಗ್ಗೆ ಗಂಟೆ 9-00ಕ್ಕೆ ಶ್ರೀ ಮಹಾಗಣಪತಿ ದೇವರಿಗೆ ಅಭಿಷೇಕ, ಮಂಗಳಾರತಿ, ಬೆಳಿಗ್ಗೆ ಗಂಟೆ 10-00ಕ್ಕೆ ಶ್ರೀ ಸುಬ್ರಹ್ಮಣೇಶ್ವರ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಮಧ್ಯಾಹ್ನ ಗಂಟೆ 12-00ಕ್ಕೆ ಶ್ರೀ ಸುಬ್ರಹ್ಮಣೇಶ್ವರ ದೇವರಿಗೆ ಕಾರ್ತಿಕ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ,, ಮಧ್ಯಾಹ್ನ ಗಂಟೆ 12-30ಕ್ಕೆ ಶ್ರೀ ಮಹಾಗಣಪತಿ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!