23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬೆಳ್ತಂಗಡಿ. ವರ್ಕಳದ ಶಿವಗಿರಿ ಮಠ ಹಾಗೂ ಮಂಗಳೂರು ನಾರಾಯಣ ಗುರು ಅಧ್ಯಯನ ಪೀಠದ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಹಾಗೂ ನಾರಾಯಣ ಗುರುಗಳ ಮಹಾನಿರ್ವಾಣ ಶತಮಾನೋತ್ಸವ ಕಾರ್ಯಕ್ರಮವು ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪಸ್ಥಿತಿಯಲ್ಲಿ ಡಿ.3ರಂದು ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ವಿವಿಧ ಸಮುದಾಯದಗಳ ಮುಖಂಡರುಗಳ ಕೂಡುವಿಕೆಯೊಂದಿಗೆ ಪೂರ್ವಭಾವಿ ಸಭೆಯು ಬೆಳ್ತಂಗಡಿ ನಾರಾಯಣಗುರು ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು ಹಾಗೂ ಶಿವಗಿರಿ ಮಠದ ಜ್ಞಾನತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಿದರು.

ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕಾರ್ಯಕ್ರಮದ ಸಂಚಾಲಕರು ರಕ್ಷಿತ್ ಶಿವರಾಂ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿ ತಾಲೂಕಿನಿಂದ ಅತೀ ಹೆಚ್ಚು ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕೆಂದರು. ಈ ಸಂದರ್ಭದಲ್ಲಿ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್, ಗೆಜ್ಜೆ ಗಿರಿ ಕ್ಷೇತ್ರದ ಗೌರವ ಅಧ್ಯಕ್ಷರಾದ ಪಿತಾಂಬರ ಹೆರಾಜೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಶ ಗಬ್ಬಲಡ್ಕ,, ಪ್ರಮುಖರಾದ ಜಯರಾಮ್ ಶೆಟ್ಟಿ ವೇಣೂರು, ಜಯವೀಕ್ರಮ ಕಲ್ಲಾಪು, ಪಿ ಟಿ ಸೆಬಾಸ್ಟಿಯನ್, ಸಂತೋಷ್ ಕುಮಾರ್, ಮೋಹನ್ ಗೌಡ ಕಲ್ಮಂಜ, ನೇಮಿರಾಜ್ ಕಿಲ್ಲೂರು, ಆಯುಬ್ ಡಿ.ಕೆ, ಬೇಬಿ ಸುವರ್ಣ ಮಾಲಾಡಿ, ಬಿ.ಕೆ. ವಸಂತ್ ಪ್ರವೀಣ್ ಹಳ್ಳಿ ಮನೆ, ವೀರೇಂದ್ರ ಕುಮಾರ್ ಜೈನ್, ದಿನೇಶ್ ಮೂಲ್ಯ ಕೊಂಡೆ ಮಾರ್, ದಯಾನಂದ ದೇವಾಡಿಗ ಮೇಣೂರು, ಶ್ರೀಮತಿ ಶೋಭಾ ನಾರಾಯಣ ಗೌಡ, ಶ್ರೀಮತಿ ಸುಮತಿ ಪ್ರಮೋದ್, ನಮಿತಾ ಕೆ ಪೂಜಾರಿ, ಶ್ರೀನಿವಾಸ್ ಕಿಣಿ, ದಿವಾಕರ ಭಂಡಾರಿ, ಸತೀಶ್ ಹೆಗ್ಡೆ, ನಿತೀಶ್ ಕೋಟ್ಯಾನ್ ಎಂ. ಕೆ ಪ್ರಸಾದ್ , ಹಾಗೂ ವಿವಿಧ ದೇವಸ್ಥಾನಗಳ, ಸಮುದಾಯಗಳ ಮತ್ತು ಪಕ್ಷಗಳ ಅಧ್ಯಕ್ಷರು ಸದಸ್ಯರು, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya
error: Content is protected !!