July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

ಕಕ್ಯಪದವು: ಉಳಿ ಗ್ರಾಮ ಪಂಚಾಯತ್ ಕಕ್ಯಪದವು ಹಾಗೂ ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ನ.19 ರಂದು “ಸ್ವಚ್ಚತಾ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

“ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ; ಜನರು ಮತ್ತು ಯುವಕರು ಸೇರಿಕೊಂಡಾಗ ಮಾತ್ರ ಶಾಶ್ವತ ಬದಲಾವಣೆ ಸಾಧ್ಯ” ಎಂಬ ನಿಟ್ಟಿನಲ್ಲಿ, ಎಲ್‌.ಸಿ.ಆರ್. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಉಳಿ ಗ್ರಾಮ ಪಂಚಾಯತ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು. ಸಾರ್ವಜನಿಕ ರಸ್ತೆ, ಪಂಚಾಯತ್ ಪರಿಸರ, ಸಾರ್ವಜನಿಕ ಸ್ಥಳಗಳು ಹಾಗೂ ಗ್ರಾಮ ಪ್ರದೇಶಗಳಲ್ಲಿರುವ ಕಸ-ತ್ಯಾಜ್ಯಗಳನ್ನು ವಿಂಗಡಿಸಿ ಸ್ವಚ್ಛಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ಉಳಿ ಗ್ರಾಮಪಂಚಾಯತಿನ ಪಿಡಿಓ ವಿದ್ಯಾಶ್ರೀ, ಪಂಚಾಯತಿನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಯೋಜಕರಾದ ಯಶವಂತ ಜಿ. ನಾಯಕ್, ಬೋಧಕ ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಅಭಿಯಾನವನ್ನು ಯಶಸ್ವಿಯಾಗಿ ಸಂಪನ್ನಗೊಳಿಸಿದರು. ಅಂತಿಮವಾಗಿ ಉಳಿ ಗ್ರಾಮಪಂಚಾಯತಿನ ಕಾರ್ಯದರ್ಶಿ ಯಶೋಧರ ಧನ್ಯವಾದಗಳನ್ನು ಸಲ್ಲಿಸಿದರು.

Related posts

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya
error: Content is protected !!