24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

ಪುಂಜಾಲಕಟ್ಟೆ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ. 19ರಂದು ಮಧ್ಯಾಹ್ನ ಸಂಭವಿಸಿದೆ.

ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21ವ) ಮೃತಪಟ್ಟವರು. ಸ್ಕೂಟರ್ ನ ಇನ್ನೋರ್ವ ಸವಾರೆ, ಗುರುವಾಯನಕೆರೆ ನಿವಾಸಿ ಪೃಥ್ವಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇಬ್ಬರೂ ಮಂಗಳೂರು ಕಾಲೇಜಿನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿನಿಯರೆಂದು ತಿಳಿದು ಬಂದಿದೆ.

ಬಂಟ್ವಾಳ- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವಳಕಟ್ಟೆಯಿಂದ ಎನ್.ಸಿ.ರೋಡ್ ಗೆ ಸಾಗುವ ದಾರಿಯಲ್ಲಿ ತಿರುವೊಂದಿದ್ದು, ತೀರಾ ಅಪಾಯಕಾರಿಯಾಗಿದ್ದು ಅನೇಕ ಅಪಘಾತಗಳು ಸಂಭವಿಸಿವೆ.

ಇಬ್ಬರೂ ಬೆಳ್ತಂಗಡಿಯಿಂದ ಕಾಲೇಜಿಗೆ ಹೋಗುವ ವೇಳೆ ಈ ತಿರುವಿನಲ್ಲಿ ವ್ಯಾಗನಾರ್ ಕಾರು ಮತ್ತು ಹೊಂಡಾ ಆಕ್ಟಿವ್ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Related posts

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya
error: Content is protected !!