38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

ಬೆಳ್ತಂಗಡಿ: ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ, ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಮತ್ತು ಪಡಿ ಮಂಗಳೂರು ಇವರ ಸಹಬಾಗಿತ್ವದಲ್ಲಿ 2025 ರ ಸಾಲಿನ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮದ ಉದ್ಘಾಟನೆಯು ಬೆಳ್ತಂಗಡಿ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು .

ಮಕ್ಕಳ ಹಕ್ಕುಗಳಿಗೆ ಧ್ವನಿ ಆಗೋಣ, ಮಕ್ಕಳ ಹಕ್ಕುಗಳನ್ನು ಗೌರವಿಸೋಣ, ಮಕ್ಕಳು ಸುರಕ್ಷಿತವಾಗಿದ್ದರೆ ಸಮಾಜ ಸುರಕ್ಷಿತವಾಗಿರುತ್ತದೆ ಎಂಬ ಈ ಘೋಷಣೆಯನ್ನು ಬ್ಯಾನರ್ ಬಿಡಿಸುವ ಮೂಲಕ ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ ಇದರ ಮ್ಯಾನೇಜಿಂಗ್ ಡೈರೆಕ್ಟರ್ ತಲ್ಹತ್ ಎಂ.ಜಿ ರವರು ಉದ್ಘಾಟಿಸಿದರು.

ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಜಿಲ್ಲಾ ಸಂಚಾಲಕರಾದ ಮಹಮ್ಮದ್ ರಫೀಕ್ ದರ್ಬೆ ಇವರು ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಹೇಳಿದರು .
ದಕ್ಷಿಣ ಕನ್ನಡ ಜಿಲ್ಲಾ ಬಾಲ ನ್ಯಾಯಮಂಡಳಿಯ ನಿಕಟ ಪೂರ್ವ ಸದಸ್ಯರು ಮತ್ತು ಪಡಿ ಸಂಸ್ಥೆಯ ಸಂಯೋಜಕರಾದ ಕಸ್ತೂರಿ ಬೊಳುವಾರು ಇವರು ಸಮಾಜ ಸುಭದ್ರವಾಗಿದ್ದರೆ ಅಲ್ಲಿ ಮಕ್ಕಳು ಭದ್ರವಾಗಿರುತ್ತಾರೆ, ಮಕ್ಕಳನ್ನು ಅವರ ಹಕ್ಕುಗಳಿಂದ ವಂಚಿತರಾಗದಂತೆ ರಕ್ಷಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಹದಿಹರೆಯದಲ್ಲಿ ಮಕ್ಕಳು ತಮ್ಮ ಜೀವನದ ಗುರಿಯನ್ನು ನಿರ್ಧರಿಸುವಲ್ಲಿ ಸಮಾಜವು ಮಕ್ಕಳಿಗೆ ಸಹಕಾರಿಯಾಗಬೇಕು ಎಂದು ಹೇಳಿದರು. ಮಕ್ಕಳ ರಕ್ಷಣೆಗೆ ಹಲವಾರು ಕಾನೂನುಗಳು ಇದ್ದರೂ ಕೂಡ ಮಕ್ಕಳು ಒಂದಲ್ಲ ಒಂದು ಸಮಸ್ಯೆಗಳಿಗೆ ಒಳಗಾಗುವುದನ್ನು ನೋಡುತ್ತಿದ್ದೇವೆ ಅದಕ್ಕಾಗಿ ಪ್ರತಿಯೊಬ್ಬರನ್ನು ಜಾಗೃತಗೊಳಿಸುವ ಅಗತ್ಯತೆ ಇದೆ ಎಂದು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಜಿಲ್ಲಾ ಸಹ ಸಂಚಾಲಕರಾದ ರಮಾನಂದ ಸಾಲಿಯಾನ್ ಮುಂಡೂರು ಹೇಳಿದರು.

ಬೆಳ್ತಂಗಡಿ ತಾಲೂಕು ಮಕ್ಕಳ ಹಕ್ಕುಗಳ ಮಹೋತ್ಸವ ಸಮಿತಿಯ ಸಹ ಸಂಚಾಲಕರಾದ ಮಹಮ್ಮದ್ ನಜೀರ್ ಎಚ್ ಮಾತನಾಡಿ ಹಲವಾರು ಮಕ್ಕಳು ಸರಕಾರ ನಿಗದಿಪಡಿಸಿರುವ ವೈಯಕ್ತಿಕ ದಾಖಲೆಗಳನ್ನು ಹೊಂದಿರದ ಕಾರಣ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ವಂಚಿತರಾಗುತ್ತಿದ್ದಾರೆ ಈ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಅನುಗ್ರಹ ಟ್ರೈನಿಂಗ್ ಕಾಲೇಜು ನಿರ್ದೇಶಕರಾದ ತೌಸಿಫ್ ಕಕ್ಕಿಂಜೆ ರವರು ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ತಾಲೂಕು ಸಂಚಾಲಕ ಅಬ್ದುಲ್ ಖಾದರ್ ನಾವೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಈ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲ ಸಂಘ-ಸಂಸ್ಥೆಗಳು ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಬೆಳ್ತಂಗಡಿ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಪದಾಧಿಕಾರಿಗಳಾದ ಶ್ರೀಮತಿ ಜಲಜಾಕ್ಷಿ ಗುರುವಾಯನಕೆರೆ ಮತ್ತು ನವೀನ್ ಮೇಲಂತಬೆಟ್ಟು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಗ್ರಹ ಟ್ರೈನಿಂಗ್ ಕಾಲೇಜಿನ ಫೈರ್ ಅಂಡ್ ಸೇಫ್ಟಿ ವಿಭಾಗದ ಮುಖ್ಯಸ್ಥೆ ಅಂಕಿತ ಕಾರ್ಯಕ್ರಮವನ್ನು ನಿರೂಪಿಸಿದರು. ಶಮೀಮ ವಂದಿಸಿದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya
error: Content is protected !!