September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

ಮುಂಡಾಜೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ, ಉಜಿರೆ ಇದರ ಸಮಾಜ ಕಾರ್ಯ ವಿಭಾಗದ ವತಿಯಿಂದ ‘ ಪೌಷ್ಠಿಕ ಆಹಾರ ಮತ್ತು ಆರೋಗ್ಯ ‘ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಪ್ರೌಢಶಾಲೆ, ಮುಂಡಾಜೆ ಇಲ್ಲಿ ನಡೆಸಲಾಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ, ಉಜಿರೆ ಇಲ್ಲಿಯ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುದರ್ಶನ್ ಪಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.

ಪೌಷ್ಠಿಕ ಆಹಾರದ ಅರ್ಥ, ಪೌಷ್ಠಿಕ ಆಹಾರದ ಅನುಕೂಲಗಳು, ಜಂಕ್ ಫುಡ್ ಮತ್ತು ಅದರ ಪರಿಣಾಮಗಳು ಹಾಗೂ ಸಮತೋಲನ ಆಹಾರ ಮತ್ತು ಅದರ ಉಪಯೋಗಗಳು ಮುಂತಾದ ವಿಷಯಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕರಾದ ಶ್ರೀ ಎಂ. ಟಿ. ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್, ಕೆ. ಭರತ್, ನಿತಿನ್ ಆರ್, ವಂದಿತಾ ಪ್ರಭು ಟಿ, ವಿಜೇತ್ ಮತ್ತು ಯಶ್ಮಿತಾ ಎ ರವರು ಕಾರ್ಯಕ್ರಮವನ್ನು ಆಯೋಜಿಸಿ, ನಡೆಸಿಕೊಟ್ಟರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ಮತ್ತು ಸದಸ್ಯ ಸುಪ್ರೀತ್ ಪಾಡೆಂಕಿ ರವರುಗಳಿಗೆ ನುಡಿನಮನ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya
error: Content is protected !!