September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ , ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲಾ ವಿಭಾಗ ವಾಮದಪದವು ಇವರ ಜಂಟಿ ಆಶ್ರಯದಲ್ಲಿ 2025-26 ನೇ ಸಾಲಿನ ವಾಮದ ಪದವು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವವು ನ.19ರಂದು ನಡೆಯಿತು.

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳು ವಲಯ ಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸಿ ಅಮೋಘ ಸಾಧನೆಯನ್ನು ಮಾಡಿರುತ್ತಾರೆ.

ಕವನ ವಾಚನ ಸ್ಪರ್ಧೆ ಮತ್ತು ಚರ್ಚಾಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಪ್ರತಿಕ್ಷಾ ಪ್ರಥಮ ಸ್ಥಾನ, ಇಂಗ್ಲೀಷ್ ಭಾಷಣದಲ್ಲಿ ಒಂಬತ್ತನೇ ತರಗತಿಯ ಸಮನ್ವಿ ಎಚ್ . ಕೆ. ಪ್ರಥಮ ಸ್ಥಾನ, ಭಾವಗೀತೆ ಸ್ಪರ್ಧೆಯಲ್ಲಿ ಎಂಟನೇ ತರಗತಿಯ ತನ್ವಿ ಜೆ. ಪಿ. ಪ್ರಥಮ ಸ್ಥಾನ, ಜನಪದ ಗೀತೆ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿಯ ಹಿತೇಶ್ ಟಿ ಆರ್ ದ್ವಿತೀಯ ಸ್ಥಾನ ಹಾಗೂ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಒಂಬತ್ತನೇ ತರಗತಿಯ ಅಧಿತಿ ಎಂ ಪ್ರಭು ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಒಟ್ಟು 4 ಪ್ರಥಮ ಹಾಗೂ 2 ದ್ವಿತೀಯ ಬಹುಮಾನಗಳನ್ನು ಪಡೆಯುವುದರ ಮೂಲಕ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯು ವಲಯ ಮಟ್ಟದ ಕಲೋತ್ಸವದ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು,
ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ 6 ವಿದ್ಯಾರ್ಥಿಗಳು ತಾಲೂಕು ಮಟ್ಟದ ಕಲೋತ್ಸವಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಅಮ್ಮುಕುಮಾರ್ ರವರಿಗೆ ನುಡಿನಮನ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ಯ್ರೋತ್ಸವ ಆಚರಣೆ

Suddi Udaya

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya
error: Content is protected !!