September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ನ.20 ರಂದು ಶಾಲಾ ಸಂಚಾಲಕರಾದ ವಂ. ಫಾ| ಅಬೆಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಗಳಾಗಿ ರಾಂಬೊ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಮಾಲಕರಾದ ರೆಜಿನಾಲ್ಡ್ ಸಲ್ದಾನ, ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ, ಅಂತಾರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ ವಿಲೋನಾ ಡಿಕುನ್ಹಾ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಗುರುರಾಜ್ ಶಬರಾಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರೆಜಿನಾಲ್ಡ್ ಸಲ್ದಾನ ಹಾಗೂ ವಿಲೋನಾ ಡಿಕುನ್ಹಾ ಇವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾದ ರೆಜಿನಾಲ್ಡ್ ಸಲ್ದಾನ ಇವರು ಶಾಲೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾ ಶಾಲಾ ಜೀವನದಲ್ಲಿ ಆಟದ ಮಹತ್ವದ ಬಗ್ಗೆ ತಿಳಿಸಿದರು. ವಿಲೋನಾ ಡಿಕುನ್ಹಾ ಅವರು ತನ್ನ ಸಾಧನೆಗೆ ಅನುಗ್ರಹ ಶಿಕ್ಷಣ ಸಂಸ್ಥೆ ಹಾಗೂ ದೈಹಿಕ ಶಿಕ್ಷಕರ ಪ್ರೋತ್ಸಾಹದ ಕುರಿತು ಶ್ಲಾಘನೀಯ ಮಾತುಗಳಾಡಿದರು. ಶಾಲಾ ಸಂಚಾಲಕರು ಸೋಲು ಗೆಲುವುಗಳನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು. ದೈಹಿಕ ಶಿಕ್ಷಕರಾದ ವಸಂತ್ ಹೆಗಡೆ ಹಾಗೂ ನಿಶ್ಚಿತ್ ಕ್ರೀಡಾಕೂಟವನ್ನು ಉತ್ತಮವಾಗಿ ನಿರ್ವಹಿಸಿದರು. ಎಲ್ಲಾ ಸಹ ಶಿಕ್ಷಕರು, ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು. ಸಹ ಶಿಕ್ಷಕ ರವಿಕುಮಾರ್ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ವಿನಯ ಲತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು.

Related posts

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya
error: Content is protected !!