37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಪಾದೇಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್(ರಿ) ನಿಂದ ನಡೆಸಲ್ಪಡುವ ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನ.21, ರಂದು ಯಶಸ್ವಿಯಾಗಿ ನಡೆಸಲಾಯಿತು. ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ಅತಿಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಕಡಲತೀರದಲ್ಲಿ ಕಸ ಸಂಗ್ರಹ, ಪ್ಲಾಸ್ಟಿಕ್ ನಿವಾರಣೆ ಹಾಗೂ ತ್ಯಾಜ್ಯ ವಿಭಜನೆ ಕುರಿತು ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್ ನ ಅಧ್ಯಕ್ಷ ಯತೀಶ್ ರೈ,
ಪ್ರಾಣಿ ರಕ್ಷಣಾ ಮತ್ತು ಆಹಾರ ಕೇಂದ್ರದ ಶ್ರೀಮತಿ ರಜನಿ ಹಾಗೂ ದಾಮೋದರ ಶೆಟ್ಟಿ, ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಮುಖ್ಯಸ್ಥರಾದ ಶ್ರೀಮತಿ ಬಬಿತಾ ಆರ್. ನಾಥ್,ಕಾರ್ಯದರ್ಶಿಗಳಾದ ಶ್ರೀಮತಿ ಶಿವಾಣಿ ಆರ್. ನಾಥ್, ಟ್ರಸ್ಟಿ ಗಳಾದ ಜಯನಿ ಆರ್ ನಾಥ್, ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ,ಸಂಯೋಜಕರಾದ ಯಶವಂತ್ ಜಿ. ನಾಯಕ್ , ಪದವಿ ವಿಭಾಗ ಮುಖ್ಯಸ್ಥರಾದ ದೀಕ್ಷಿತಾ, ಪದವಿ ಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯಾ ಎನ್, ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಸಂಸ್ಥೆಯ ಟ್ರಸ್ಟಿ ಯಜ್ನೇಶ್ ರಾಜ್ ಸ್ವಾಗತಿಸಿ, ಪರಿಸರ ಸಂರಕ್ಷಣೆ, ಸಮುದ್ರ ಜೀವಿಗಳ ರಕ್ಷಣಾ ಜವಾಬ್ದಾರಿ ಮತ್ತು ಸಮಾಜ ಸೇವೆಯು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ” ಎಂಬ ಮಹತ್ವದ ಮಾತುಗಳೊಂದಿಗೆ ಧನ್ಯವಾದ ಸಮರ್ಪಿಸಿದರು.

ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ನಾಗರಿಕತನ ಮತ್ತು ಪರಿಸರ ಕಾಳಜಿ ಬೆಳೆಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಬೇಕು ಎಂಬ ಆಶಯದೊಂದಿಗೆ ಸಂಸ್ಥೆಯ ಆಡಳಿತ ಮಂಡಳಿಯು ಸಮಾಜಮುಖಿ ಚಟುವಟಿಕೆಗಳಿಗೆ ಪ್ರೋತ್ಸಾಹವನ್ನು ನೀಡಿ ,ಮೆಚ್ಚುಗೆ ವ್ಯಕ್ತಪಡಿಸಿತು.

Related posts

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!