September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮವು ನ.16 ರಂದು ದುಬೈಯ ಆಶೀಯಾನ ಫಾರ್ಮ್ ಹೌಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಳೊಂದಿಗೆ ,ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಸಾಧನೆ ಮಾಡಿದ ಮಕ್ಕಳಿಗೆ ಹಾಗೂ ಉದ್ಯಮಿಗಳಿಗೆ ಸನ್ಮಾನ ಮಾಡಿ ಗೌರವಿಸಿಲಾಯಿತು. ಮಧ್ಯಾಹ್ನದ ಭೋಜನ ನಂತರ ಗೌಡ ಸಮಾಜದ ಸದಸ್ಯರುಗಳಿಗೆ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಟವನ್ನು ಏರ್ಪಡಿಸಲಾಯಿತು. ಸಮ್ಮೇಳನದ ಮುಖ್ಯ ಆಯೋಜಕರಾಗಿ ಹರೀಶ್ ಕೋಡಿ, ಸುರೇಶ್ ಕುಂಪಲ, ಸುನಿಲ್ ಮೊಟ್ಟೆ ಮನೆ, ತೇಜ ಕುಮಾರ್ ಕೊರಂಬಡ್ಕ, ಮೋಹನ್ ಕಡoಬಳ, ದಿಲೀಪ್ ಉಳುವಾರ, ಶರತ್ ಚೋಕ್ಕಾಡಿ,ರೋಶನ್ ಕಂಪ, ಸುಪ್ರೀತ್ ಕುಂಡಡ್ಕ, ಜೀವನ್ ಗೌಡ ಕುಂಜತಾಡಿ, ಯತೀಶ್ ಗೌಡ, ರತೀಶ್ ಬಗ್ಗನ ಮನೆ, ಆಶೀಶ್ ಕೋಡಿ, ಮೀನಾ ಹರೀಶ್ ಕೋಡಿ, ಪುಲೋಮ ಮಹೇಂದ್ರ ಕೊಳಂಬೆ, ಹಾಗೂ ಇತರ ಸದಸ್ಯರು ಶ್ರಮಿಸಿದ್ದರು.

ಯು ಎ ಇ ಯ ವಿವಿಧ ಎಮಿರೇಟ್ಸ್ನಲ್ಲಿ ನೆಲೆಸಿರುವ ಸುಮಾರು 300 ಕ್ಕೂ ಮಿಕ್ಕಿದ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗೌಡ ಬಾಂಧವರು ಈ ಸುಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾರಂಭ ದ ಅಧ್ಯಕ್ಷತೆಯನ್ನು ಹೊದ್ದೆಟ್ಟಿ ರಾಮಚಂದ್ರ ವಹಿಸಿಕೊಂಡಿದ್ದು, ಮುಖ್ಯ ಅತಿಥಿಯಾಗಿ ಮುಕ್ಕಾಟಿ ಕಿಶೋರ್ ಭಾಗವಹಿಸಿದ್ದರು. ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆಯನ್ನು ನಿತಿನ್ ದೊರ್ತೋಡಿ ಸಾರಥ್ಯದೊಂದಿಗೆ ಯುವ ನಿರೂಪಕಿ ಶ್ರಾವ್ಯ ಗೌಡ ಹಾಗೂ ರಕ್ಷಿತಾ ಸುಪ್ರೀತ್ ನೆರವೇರಿಸಿದರು.

Related posts

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya
error: Content is protected !!