September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಮುಖ್ಯಸ್ಥರಿಗೆ ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ ೫/೨೦೨೫ ರಲ್ಲಿ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಮುಖ್ಯಾಧಿಕಾರಿಯವರಿಗೆ ತಿಳಿಸುವಂತೆ ಮುಖ್ಯಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

1. ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸುವುದು.
2. ಬೆಳ್ತಂಗಡಿ ಪಟ್ಟಣ ಪಂಚಾಯತ್ ವತಿಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು.
3.ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿAದ ವಸೂಲಿ ಮಾಡಲಾಗುವುದು.
4.ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

Related posts

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya

ಕೊಕ್ರಾಡಿ -ಸಾವ್ಯ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!