25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ.11 ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾರ್ ಪೆಟ್ರೋಲ್ ಖಾಲಿಯಾಗಿದ ಕಾರಣದಿಂದ‌ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ತಮ್ಮ KA-18-J-6348 ಬೈಕ್ ನಿಲ್ಲಿಸಿ ಹೋಗಿದ್ದರು. ಬಳಿಕ ನ.12 ರಂದು ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಈ ಬಗ್ಗೆ ಎಲ್ಲಾ ಕಡೆ ಹುಡುಕಾಟ ನಡೆಸಿದ್ರೂ ಬೈಕ್ ಪತ್ತೆಯಾಗದ ಕಾರಣ ನ.13 ರಂದು ವೇಣೂರು ಪೊಲೀಸ್ ಠಾಣೆಯಲ್ಲಿ 88/25 ಕಲಂ ನಲ್ಲಿ ಸಂಪತ್ ಕುಮಾರ್ ಪ್ರಕರಣ ದಾಖಲಿಸಿದ್ದರು‌.

ವೇಣೂರು ಸಬ್ ಇನ್ಸ್‌ಪೆಕ್ಟರ್ ಓಮನ ಮತ್ತು ಸಿಬ್ಬಂದಿ ನ.20 ರಂದು ಸಂಜೆ 6:30 ರ ಸಮಯದಲ್ಲಿ ವೇಣೂರು ಗ್ರಾಮದ ಕೆರೆಕೋಡಿ ಕರ್ತವ್ಯ ವೇಳೆ ಇಬ್ಬರು ಯುವಕರು ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಬರುತ್ತಿದ್ದಾಗ ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಯಾವುದೇ ದಾಖಲೆಗಳು ಇಲ್ಲದಿರುವುದು ಬೆಳಕಿಗೆ ಬಂದಿದೆ.

ಬೈಕ್ ವಶಕ್ಕೆ ಪಡೆದುಕೊಂಡು ಇಬ್ಬರನ್ನು ಕೂಡ ವೇಣೂರು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ ನ.10 ರಂದು ರಾತ್ರಿ ಗುರುನಾರಾಯಣ ಸರ್ಕಲ್ ಬಳಿ ನಿಲ್ಲಿಸಿದ ಬೈಕ್ ಕಳ್ಳತನ ಮಾಡಿರುವುದಾಗಿ ಬಾಯಿಬಿಟ್ಟಿದ್ದಾರೆ. ಬಂಧಿತ ಆರೋಪಿಗಳಲ್ಲಿ ಓರ್ವ ಇರ್ಷಾದ್ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಮತ್ತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಗಾಂಜಾ ಪ್ರಕರಣ ದಾಖಲಾಗಿದೆ‌.

ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್(25) ಮತ್ತು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್(26) ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳನ್ನು ನ.21 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೋರ್ಟ್ ಇಬ್ಬರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ್ ನೇತೃತ್ವದಲ್ಲಿ, ವೇಣೂರು ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಮತ್ತು ಸಬ್ ಇನ್ಸ್‌ಪೆಕ್ಟರ್ ಓಮನ ,ಎಎಸ್ಐ ವೆಂಕಟೇಶ್ ನಾಯ್ಕ್, ಸಿಬ್ಬಂದಿ ಮೋಹನ್, ಬಸವರಾಜ್, ಕೃಷ್ಣ, ಕೇಶವತಿ, ನಾಗರಾಜಪ್ಪ,ರಾಕೇಶ್,ಈರ ನಾಯ್ಕ್ ಹಾಗೂ ಚಾಲಕ ಕಿರಣ್ ಕಾರ್ಯಾಚರಣೆ ಭಾಗವಹಿಸಿದರು.

Related posts

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!