25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ.26: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ

ಬೆಳ್ತಂಗಡಿ: ಗ್ರಾಮೀಣ ಭಾಗದ ಬಡವರ, ರೈತಾಪಿ ವರ್ಗದವರಿಗೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ ಪ್ರಾರಂಭಿಸಿದ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವುದು ಸಂತಸ ತಂದಿದೆ ಎಂದು ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ಹೇಳಿದರು.


ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆಯ ನೇತೃತ್ವದಲ್ಲಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರ ಮಾರ್ಗದರ್ಶನದಂತೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯಹಸ್ತದಿಂದ ಅತ್ಯದ್ಭುತವಾಗಿ ವೈಭವದಿಂದ ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸಂಘಗಳ ಪ್ರಮುಖರನ್ನು ಆಹ್ವಾನಿಸಿಕೊಂಡು ಊರ ಪರವೂರ ಸಮಸ್ತ ನಾಗರಿಕರ ಉಪಸ್ಥಿತಿಯಲ್ಲಿ ದಿನಾಂಕ 11.2.2019 ರಂದು ಸಂಘದ ಸ್ಥಾಪನೆಯಾಗಿದೆ.


ಪ್ರಸ್ತುತ ಸಂಘದ ಉಪಾಧ್ಯಕ್ಷರಾಗಿ ಶಿವಕಾಂತ ಗೌಡ, ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ದಿನೇಶ್ ಗೌಡ ಕಲ್ಲಾಜೆ, ನಿರ್ದೇಶಕರುಗಳಾಗಿ ಲಕ್ಷö್ಮಣ ಗೌಡ, ಬಾಲಕೃಷ್ಣ ಗೌಡ ಕೇರಿಮಾರ್, ದಾಮೋದರ ಗೌಡ ಸುರುಳಿ, ಜಯಂತ ಗೌಡ ಗುರಿಪಳ್ಳ, ಸುಂದರ ಗೌಡ ಪುಡ್ಕೆತ್ತು, ಕೃಷ್ಣಪ್ಪ ಗೌಡ ಬೇಂಗಳ, ಧರ್ಮರಾಜ ಗೌಡ ಅಡ್ಕಾಡಿ, ಜಯಂತ ಗೌಡ ಓಣಿಯಾಲು, ಭರತ್ ಗೌಡ ಹಾನಿಬೆಟ್ಟು, ಕೆ.ಸಂಜೀವ ಗೌಡ ಪಾಂಚಜನ್ಯ, ಸರೋಜಿನಿ ವಿಜಯ ಕುಮಾರ್, ಡಿ. ಚೇತನಾ ಚಂದ್ರಶೇಖರ ಗೌಡ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಸೊಸೈಟಿಯಲ್ಲಿ ಒಟ್ಟು ೧೨ ಕ್ಕಿಂತ ಹೆಚ್ಚು ಸಿಬ್ಬಂದಿಗಳಿದ್ದಾರೆ. ಕಳೆದ ವರ್ಷ ೧೫೦ ಕೋಟಿಗೂ ಅಧಿಕ ವ್ಯವಹಾರ ನಡೆಸಿ ಸುಮಾರು ರೂ.೫೪ ಲಕ್ಷಕ್ಕಿಂತ ಹೆಚ್ಚು ಲಾಭ ಗಳಿಸಿದೆ. ಸಂಘದ ಕೆಲಸ ಕಾರ್ಯಗಳಿಗೆ ಹಲವಾರು ಪ್ರಶಸ್ತಿ ಮನ್ನಣೆ ದೊರಕಿವೆ ಎಂದರು. ಇದೀಗ ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸಹಸಂಸ್ಥೆಯಾಗಿ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭವು ನ.೨೬ರಂದು ಬೆಳ್ತಂಗಡಿಯ ಚರ್ಚ್ರೋಡ್ ಬಳಿಯ ಟ್ರಿನಿಟಿ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ.


ಉದ್ಘಾಟನೆಯನ್ನು ಕಾವೂರು ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಲಿದ್ದಾರೆ.
ಪ್ರಸನ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೆ. ಗಂಗಾಧರ ಗೌಡ, ಉಜಿರೆ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಗೌರವ ಉಪಸ್ಥಿತರಿರುವರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಡಿ.ಬಿ. ಬಾಲಕೃಷ್ಣ ಗೌಡ, ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಕಾರ್ಯಾಧ್ಯಕ್ಷ, ವಕೀಲ ಶ್ರೀನಿವಾಸ ಗೌಡ ಬೆಳಾಲು, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಭಾರತಿ ಜಿ. ಭಟ್, ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್ ಬಿ.ಎಸ್., ವಕೀಲ ವಸಂತ ಗೌಡ ಮರಕಡ, ಜಿಲ್ಲಾ ಒ.ಗೌ.ಸೇ. ಸಂಘದ ನಿರ್ದೇಶಕರಾದ ವಿಜಯ ಗೌಡ ವೇಣೂರು, ಸೌಮ್ಯಲತಾ ಜಯಂತ್ ಗೌಡ, ಜೊತೆ ಕಾರ್ಯದರ್ಶಿ ದಾಮೋದರ ಗೌಡ ಸುರುಳಿ, ಜತೆ ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ, ವಕೀಲ ನವೀನ್ ಗೌಡ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

ಇತರ ಚಟುವಟಿಕೆಗಳು: ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಪ್ರತಿವರ್ಷ ರಕ್ತದಾನ ಶಿಬಿರ, ಕ್ರೀಡಾಕೂಟ, ಕೆಂಪೇಗೌಡ ಜಯಂತಿ ಆಚರಣೆ, ಆದಿಚುಂಚನಗಿರಿ ಶಾಖಾ ಮಠಕ್ಕೆ ಸಹಕಾರ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸಂಘದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತಾ ಬರುತ್ತಿದೆ.

Related posts

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!