ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ(ರಿ) ಉಜಿರೆ ಇದರ ಸಹಯೋಗದೊಂದಿಗೆ, ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಉಜಿರೆ, ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆ ಉಜಿರೆ ಹಾಗೂ ಶ್ರೀ ಧ. ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಣದಲ್ಲಿ ವಾರ್ಷಿಕ ಕ್ರೀಡಾ ಕೂಟ ನಡೆಯಿತು.

ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಮಾಲಾಡಿ ಸ. ಹಿ. ಪ್ರಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ್ ಜೈನ್ ಉದ್ಘಾಟಕರಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಹಾಗೂ ಉಜಿರೆ ಎಸ್.ಡಿ.ಎಮ್ ಸ್ಪೋರ್ಟ್ಸ್ ಕ್ಲಬ್ ಕ್ರೀಡಾ ಕಾರ್ಯದರ್ಶಿಯವರಾದ ರಮೇಶ್.ಎಚ್ ಇವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ಕೆ.ಜಿ, ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಮುಖ್ಯೋಪಾಧ್ಯಾರಾದ ಶ್ರೀಮತಿ ವಿದ್ಯಾಲಕ್ಷ್ಮೀ, ಶ್ರೀ. ಧ. ಮಂ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾರಾದ ಶ್ರೀಮತಿ ವಿದ್ಯಾ. ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಎಸ್.ಡಿ.ಎಮ್ ಬಿ.ವೈ.ಎನ್.ಎಸ್ ಕಾಲೇಜಿನ ಪಿ.ಡಿ ಶ್ರೀ ಧರ್ಮೇಂದ್ರ ನಿರೂಪಿಸಿದರು.

Related posts

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ಅಗ್ರಗಣ್ಯ ಸ್ವಾತಂತ್ರ್ಯ ಹೋರಾಟಗಾರ ಉಪ್ಪಿನಂಗಡಿಯ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!