September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

ಬೆಳ್ತಂಗಡಿ: ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿಯು ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯರಾದ ನಿಸಾರ್ ಕುದ್ರಡ್ಕ ನೇತೃತ್ವದಲ್ಲಿ ಕಲ್ಲೇರಿ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಎಸ್.ಡಿ.ಪಿ.ಐ ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ವರ್ಷಗಳಿಂದ ಈ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ದಿನನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ರಸ್ತೆಯಲ್ಲಿ ಗುಂಡಿ ಬಿದ್ದಿದ್ದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಉದಾಹರಣೆಗಳಿವೆ. ದಿನನಿತ್ಯ ಈ ಮಾರ್ಗದಲ್ಲಿ ಶಾಲಾ- ಕಾಲೇಜು ಮಕ್ಕಳು ಓಡಾಡುತ್ತಿದ್ದು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆ ದುರಸ್ತಿ ಮಾಡಿಕೊಡಬೇಕು ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಪಂಚಾಯತ್ ಸದಸ್ಯರಾದ ಫೈಝಲ್ ಮೂರುಗೋಳಿ, ಅನ್ವರ್ ತೆಕ್ಕಾರು, ಬ್ಲಾಕ್ ನಾಯಕರುಗಳಾದ ಸಾದಿಕ್ ಕುದ್ರಡ್ಕ, ರಝಕ್ ಬಿ.ಎಂ, ರಝಕ್ ಕುದ್ರಡ್ಕ, ಶುಕೂರ್ ಕುಪ್ಪೆಟ್ಟಿ, ರೌಫ್ ಪುಂಜಾಲಕಟ್ಟೆ, ಬ್ರಾಂಚ್ ಪದಾಧಿಕಾರಿಗಳು, ಕಾರ್ಯಕರ್ತರು, ನಾಗರೀಕರು ಪಾಲ್ಗೊಂಡಿದ್ದರು.

Related posts

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya
error: Content is protected !!