September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ಬೆಳ್ತಂಗಡಿ: ರಾಜ್ಯ ಮಟ್ಟದ 17 ವರ್ಷ ವಯೋಮಾನ ವಿಭಾಗದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಈಗಾಗಲೇ ತಾಲೂಕು, ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ, ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈತ ಶ್ರೀರಾಮ ಪ್ರೌಢಶಾಲೆ ಸುಕ್ಕೇರಿ ಇಲ್ಲಿ 10 ನೇ ತರಗತಿ ವಿಧ್ಯಾರ್ಥಿ. ಸುಕ್ಕೇರಿ ಗ್ರಾಮದ ಭಂಡಾರಗೋಳಿ ನಿವಾಸಿ ಶ್ರೀಧರ್ ಮತ್ತು ಪುಷ್ಪ ರವರ ಪುತ್ರ. ರಾಷ್ಟ್ರದ ಮಟ್ಟದ ಕಬಡ್ಡಿ ಪಂದ್ಯಾಟವು ಹರಿಯಾಣ ರಾಜ್ಯದಲ್ಲಿ ನಡೆಯಲಿದ್ದು, ಸೋಮವಾರ ಹರಿಯಾಣಕ್ಕೆ ತೆರಳಲಿದ್ದಾರೆ. ನವೆಂಬರ್ 27 ರಿಂದ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯೊಬ್ಬ 17 ವರ್ಷ ವಯೋಮಾನದ ಸಬ್ ಜ್ಯೂನಿಯರ್ ವಿಭಾಗದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗುವ ಮೂಲಕ ಕಬಡ್ಡಿ ಕ್ಷೇತ್ರದಲ್ಲಿ ಹೊಸ ಬರವಸೆ ಮೂಡಿದೆ

Related posts

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ನೆರಿಯ: ಬೈಕ್ – ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!