September 6, 2026
ಗ್ರಾಮಾಂತರ ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

ನ. 22.ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ, ಆಂತರಿಕ ಗುಣಮಟ್ಟ ಭರವಸೆ ಕೋಶ , ಮತ್ತು ಶಿಕ್ಷಕ ರಕ್ಷಕ ಸಂಘದ ಸಹಯೋಗದೊಂದಿಗೆ 2025-26ನೇ ಸಾಲಿನ ಪೋಷಕರ ಸಭೆಯನ್ನು ಆಯೋಜಿಸಲಾಯಿತು.

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ವೈಲೆಟ್ ಮೋರಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರದ ಕುರಿತಾದ ಸೂಕ್ಷ್ಮ ವಿಚಾರಗಳನ್ನು ತಿಳಿಸಿದರು.
ಸಭಾಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ. ಕಾಲೇಜಿನಲ್ಲಿ ಲಭ್ಯವಿರುವ ಎಲ್ಲ ಸೌಲಭ್ಯಗಳ ಕುರಿತಾಗಿ ಸಮಗ್ರ ಮಾಹಿತಿ ನೀಡಿದರು ಮತ್ತು ವಿದ್ಯಾರ್ಥಿಗಳ ಪ್ರಗತಿಯೊಂದಿಗೆ ಸಂಸ್ಥೆಯ ಬೆಳವಣಿಗೆಗೆ ಸಹಕಾರ ನೀಡುವಂತೆ ತಿಳಿಸಿದರು. ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಉಸ್ಮಾನ್ , ಜೊತೆ ಕಾರ್ಯದರ್ಶಿ ಪ್ರಮೀಳ ಹಾಗೂ ಪೋಷಕರು ಉಪಯುಕ್ತ ಮಾಹಿತಿಗಳನ್ನು ಸಭೆಯಲ್ಲಿ ಹಂಚಿಕೊಂಡರು.

ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಕುಶಾಲಪ್ಪ ಎಸ್ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕ ಮಾತುಗಳನ್ನಾಡಿದರು . ಶಿಕ್ಷಕ ರಕ್ಷಕ ಸಂಘದ ಸಂಚಾಲಕರಾದ ಸಹಪ್ರಾಧ್ಯಾಪಕ ನವೀನ್ ಅತಿಥಿಗಳನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಪದ್ಮನಾಭ ಕೆ, ವಿಭಾಗ ಮುಖ್ಯಸ್ಥರುಗಳು, ಹಾಗೂ ಉಪನ್ಯಾಸಕರು ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಿದರು.

ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ರಾಜೇಶ್ವರಿ ಎಚ್ ಎಸ್ ವಂದನಾರ್ಪಣೆ ಮಾಡಿದರು.
ಬಿಎ ವಿದ್ಯಾರ್ಥಿ ಜಗದೀಶ್ ಪ್ರಾರ್ಥನೆ ನೆರವೇರಿಸಿದರು. ಪ್ರಥಮ ಎಂ ಎ ವಿದ್ಯಾರ್ಥಿನಿ ಪೂಜಾ ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya
error: Content is protected !!