September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯದ ಬರವಣಿಗೆ” ವಿಷಯದ ಕುರಿತು ನ. 24 ರಂದು ವಿಶೇಷ ಕಾರ್ಯಾಗಾರವನ್ನು ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಈ ಕಾರ್ಯಾಗಾರವು ವಿದ್ಯಾರ್ಥಿಗಳ ಸಾಹಿತ್ಯ ಜ್ಞಾನ ವಿಸ್ತರಣೆಗೆ ಮಹತ್ವದ ವೇದಿಕೆಯಾಯಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಗೀತಾ. ಡಿ ಹಾಗೂ ಸಂದ್ಯಾ ಎನ್ ಭಾಗವಹಿಸಿ ಕನ್ನಡ ಸಾಹಿತ್ಯದ ಪಾರಂಪರ್ಯ, ಅದರ ಐತಿಹಾಸಿಕ ಬೆಳವಣಿಗೆ, ಆಧುನಿಕ ಸಾಹಿತ್ಯದ ಪ್ರವೃತ್ತಿಗಳು, ವಿವಿಧ ಸಾಹಿತ್ಯ ಪ್ರಕಾರಗಳ ವಿಶಿಷ್ಟತೆ, ಹಾಗೂ ಉತ್ತಮ ಸಾಹಿತ್ಯ ರಚನೆಗೆ ಅಗತ್ಯವಾದ ತಂತ್ರಗಳು ಮತ್ತು ವಿಧಾನಗಳನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ಮತ್ತು ಮನದಟ್ಟು ಆಗುವಂತೆ ವಿವರಿಸಿದರು.

ಕಾರ್ಯಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೊ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಾಹಿತ್ಯ ಆಸಕ್ತಿ ಮತ್ತು ಕೌಶಲ್ಯವನ್ನು ಉತ್ತೇಜಿಸಿದರು.

ಕಾರ್ಯಾಗಾರವು ವಿದ್ಯಾರ್ಥಿಗಳಲ್ಲಿ ಸೃಜನಶೀಲ ಚಿಂತನೆ, ಕನ್ನಡ ಭಾಷಾ ನೈಪುಣ್ಯ, ಸಾಹಿತ್ಯದ ಅರ್ಥೈಸುವ ಸಾಮರ್ಥ್ಯ ಮತ್ತು ಬರವಣಿಗೆಯ ಕೌಶಲ್ಯವನ್ನು ವೃದ್ಧಿಸುವಲ್ಲಿ ಮಹತ್ವದ ಪಾತ್ರವಹಿಸಿತು.

Related posts

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya
error: Content is protected !!