22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

ಕಲ್ಮಂಜ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸಾಯತ್ತ) ಉಜಿರೆ ಇದರ ಸಮಾಜ ಕಾರ್ಯ ವಿಭಾಗ ಮತ್ತು ಕಲ್ಮಂಜ ಗ್ರಾಮ ಪಂಚಾಯತ್ ಇದರ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಂಜ ಇಲ್ಲಿ ಮಕ್ಕಳಿಗೆ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ನ.20 ರಂದು ನಡೆಯಿತು.

ಅದೇ ರೀತಿ ಅತಿಥಿಗಳಾಗಿ ಆಗಮಿಸಿದಂತಹ ಶ್ರೀಮತಿ ಲಕ್ಷ್ಮಿ, ಗ್ರಂಥಪಾಲಕರು ಗ್ರಾಮ ಪಂಚಾಯತ್ ಕಲ್ಮಂಜ ಇವರು ಇಂದಿನ ಪೀಳಿಗೆಯ ಮಕ್ಕಳಿಗೆ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಇರಬೇಕಾಗಿರುವುದು ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷ ಚಿದಾನಂದ ರವರು ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಅದೇ ರೀತಿ ಉತ್ತಮ ಆಹಾರ ಪದ್ಧತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಅದಲ್ಲದೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು ಕಾರ್ಯಕ್ರಮದ ಆಯೋಜಕರಾದಂತಹ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳ ಶಿಸ್ತು ಮತ್ತು ಕಾರ್ಯಕ್ರಮ ನಿರ್ವಹಣೆಯನ್ನು ಅಭಿನಂದಿಸಿ ಕಾರ್ಯಕ್ರಮದ ಉದ್ಘಾಟನಾ ಭಾಷಣವನ್ನು ನೆರವೇರಿಸಿದರು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕು| ಡಯಾನ , ವಿದ್ಯಾರ್ಥಿನಿ ದ್ವಿತೀಯ ಎಂ ಎಸ್ ಡಬ್ಲ್ಯೂ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇವರು ಪೌಷ್ಟಿಕ ಆಹಾರ ಎಂದರೇನು? ಪೌಷ್ಟಿಕ ಆಹಾರ ಸೇವನೆಯಿಂದ ಆಗುವ ಉಪಯೋಗಗಳು, ಅದೇ ರೀತಿ ನೀರು ಕುಡಿಯುವುದರಿಂದ ಹಾಗೂ ವ್ಯಾಯಾಮ ಮಾಡುವುದರಿಂದ ಆಗುವ ಪ್ರಯೋಜನಗಳನ್ನು ಹಾಗೂ ಜಂಕ್ ಫುಡ್ ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ಕೂಡ ಮಕ್ಕಳಿಗೆ
ತಿಳಿಸಿದರು. ಅದಲ್ಲದೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಸೇವಿಸುವುದು ಆಹಾರ ಪದ್ಧತಿಯ ಪ್ರಮುಖ ಅಂಶ ಎಂದು ತಿಳಿಸಿದರು.

ಅದೇ ರೀತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀಮತಿ ಮಂಜುಳಾ ಜೆ.ಟಿ , ಮುಖ್ಯ ಗುರುಗಳು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಂಜ, ಇವರು ಕು| ಡಯಾನ ಇವರಿಗೆ ವಂದಿಸಿ, ಕಾರ್ಯಕ್ರಮಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕುರಿತು ಕೆಲವು ಸಲಹೆಗಳನ್ನು ಮಕ್ಕಳಿಗೆ ನೀಡಿದರು. ಅದೇ ರೀತಿ ಈ ಕಾರ್ಯಕ್ರಮದ ಆಯೋಜಕರಾದಂತಹ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ , ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ತಿಳಿಸಿದರು.

ಕಾರ್ಯಕ್ರಮದ ಸಂಯೋಜಕರಾದಂತಹ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ,ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಚರಣ್ ಕೆ ಹಾಗೂ ಗಣೇಶ್ ಕೃಷ್ಣ ದೇವಾಡಿಗ ಇವರು ಕಾರ್ಯಕ್ರಮದ ಸಿದ್ಧತೆಯನ್ನು ಮಾಡಿದರು. ಕು| ಕೆ.ಎಸ್ ಭಾರ್ಗವಿ ಕಾರ್ಯಕ್ರಮ ನಿರೂಪಿಸಿದರು. ಕು| ರಕ್ಷಿತಾ ಜಿ.ಕೆ ಸ್ವಾಗತಿಸಿ, ಲೀಲಾಧರ್ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಮಂಜ ಇಲ್ಲಿನ ಬೋಧಕ ವೃಂದ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಡಿ.ಎಡ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Related posts

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಕುವೆಟ್ಟು: ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya
error: Content is protected !!