September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಗವದ್ಗೀತಾ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ದ.ಕ. ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ , ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶಿರಸಿ , ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ , ಮಂಗಳೂರು ಸಂಸ್ಕೃತ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ರಾಮಕೃಷ್ಣ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಶ್ರೀ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯಶಾಸ್ತ್ರದ ಹಂಸಿನಿ ಭಿಡೆ ಇವರು ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ದ್ವಿತೀಯ ಕಲಾ ವಿದ್ಯಾರ್ಥಿನಿ ನಿಜ ಕುಲಾಲ್ ತೃತೀಯ ಬಹುಮಾನ ಪಡೆದರು.
ಬಹುಮಾನಿತರನ್ನು ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ಅಭಿನಂದಿಸಿದ್ದಾರೆ.

Related posts

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya
error: Content is protected !!